ದಾವಣಗೆರೆ: ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ವಿಧಿಸಿದ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿಯಲ್ಲಿ ಪಾವತಿಸುವ ಸರ್ಕಾರ ಆದೇಶದ ಹಿನ್ನೆಲೆ ಜಿಲ್ಲೆಯಲ್ಲಿ ಇದುವರೆಗೆ 2400 ಪ್ರಕರಣಗಳಿಗೆ ಒಟ್ಟು 06 ಲಕ್ಷಕ್ಕೂ ಹೆಚ್ಚು ದಂಡ ಸಂಗ್ರಹವಾಗಿದೆ.
ಶೇ.50 ರಷ್ಟು ದಂಡ ಸದುಪಯೋಗ ಪಡಿಸಿಕೊಂಡು ಸಾರ್ವಜನಿಕರು ತಮ್ಮ ಸಂಚಾರಿ ನಿಯಮ ಉಲ್ಲಂಘನೆಯ ಪ್ರಕರಣಗಳಿಗೆ ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತವನ್ನು ಠಾಣೆಗಳಿಗೆ ಬಂದು ಹಾಗೂ ಆನ್‌ಲೈನ್ ಪೇಮೆಂಟ್ ಮೂಲಕ ಪಾವತಿಸುತ್ತಿದ್ದಾರೆ.
ತಮ್ಮ ಹತ್ತಿರದ ದಾವಣಗೆರೆ ನಗರದ ಉತ್ತರ / ದಕ್ಷಿಣ ಸಂಚಾರಿ ಪೊಲೀಸ್ ಠಾಣೆಗಳಲ್ಲಿ ಮತ್ತು ನಗರದಲ್ಲಿ ವಿವಿಧ ಕಡೆ ಸ್ಥಾಪಿಸಲಾಗಿರುವ ಸಂಚಾರಿ ಇ-ಚಲನ್ ಪಾವತಿ ಸ್ಥಳಗಳಲ್ಲಿ / ಕರ್ನಾಟಕ ಒನ್ ಜಾಲತಾಣ / ದಾವಣಗೆರೆ ಒನ್ ಮೂಲಕ ಹಾಗೂ ಜಗಳೂರು, ಚನ್ನಗಿರಿ, ಹರಿಹರ, ಹೊನ್ನಾಳಿ, ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಪಾವತಿಸುವ ಮೂಲಕ ಇದರ ಸದುಪೊಯೋಗ ಪಡೆದುಕೊಳ್ಳಲು ಈ ಮೂಲಕ ಕೋರಲಾಗಿದೆ.
ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ತಮ್ಮ ವಾಹನಗಳ ಮೇಲೆ ಸಂಚಾರಿ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಪರಿಶೀಲಿಸಿಕೊಳ್ಳಲು ಸಂಚಾರಿ ಇ-ಚಲನ್ ಪಾವತಿ ಸ್ಥಳಗಳಲ್ಲಿ ಹಾಗೂ ಕರ್ನಾಟಕ ಒನ್ ಜಾಲತಾಣಕ್ಕೆ ಭೇಟಿ ನೀಡಿ ಇದರ ಸದುಪಯೋಗ ಪಡಿಸಿಕೊಳ್ಳಲು ತಿಳಿಸಲಾಗಿದೆ.
ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ಶೇ.50% ರಿಯಾಯಿತಿಯಲ್ಲಿ ದಂಡದ ಮೊತ್ತವನ್ನು ಪಾವತಿಸುವ ಆದೇಶದ ಬಗ್ಗೆ ದಾವಣಗೆರೆ ಜಿಲ್ಲೆಯ ಸಂಚಾರಿ ಪೊಲೀಸರು ಹಾಗೂ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.



