Connect with us

Dvgsuddi Kannada | online news portal | Kannada news online

ದಾವಣಗೆರೆ: 6 ರಿಂದ 10ನೇ ತರಗತಿಯವರೆಗೆ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: 6 ರಿಂದ 10ನೇ ತರಗತಿಯವರೆಗೆ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ದಾವಣಗೆರೆ: ಪ್ರಸಕ್ತ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ, ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ (6 ರಿಂದ 10ನೇ ತರಗತಿಯವರೆಗೆ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜೂ.20 ಕೊನೆಯ ದಿನವಾಗಿರುತ್ತದೆ.

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರಕ್ಕಾಗಿ ಇಲಾಖೆಯ ವೆಬ್‍ಸೈಟ್ www.bcwd.karnataka.gov.in HMIS ನಲ್ಲಿ ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ bcwd.hostels@karnataka.gov.in ಸಹಾಯವಾಣಿ ಸಂಖ್ಯೆ 080-8050370006 ಯ ಮುಖಾಂತರ ಅಥವಾ ಸಂಬಂಧಿಸಿದ ತಾಲ್ಲೂಕು ಕಲ್ಯಾಣಾಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top