Connect with us

Dvgsuddi Kannada | online news portal | Kannada news online

ದಾವಣಗೆರೆ: ಎಂಜಿನಿಯರಿಂಗ್ ಪ್ರವೇಶ ಶುಲ್ಕ ಏರಿಕೆ ಖಂಡಿಸಿ ಎಬಿವಿಪಿ ಪ್ರತಿಭಟನೆ

ದಾವಣಗೆರೆ

ದಾವಣಗೆರೆ: ಎಂಜಿನಿಯರಿಂಗ್ ಪ್ರವೇಶ ಶುಲ್ಕ ಏರಿಕೆ ಖಂಡಿಸಿ ಎಬಿವಿಪಿ ಪ್ರತಿಭಟನೆ

ದಾವಣಗೆರೆ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದ ಗ್ರಾಮಾಂತರ ಪೊಲೀಸ್ ಠಾಣೆ ವೃತ್ತದಲ್ಲಿಂದು ಸರ್ಕಾರಿ ಕೋಟಾದ ಎಂಜಿನಿಯರಿಂಗ್ ಪ್ರವೇಶ ಶುಲ್ಕ ಏರಿಕೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಕೋವಿಡ್ ಹಿನ್ನೆಲೆಯಲ್ಲಿ ಖಾಸಗಿ ಕಾಲೇಜುಗಳ ಎಂಜಿನಿಯರಿಂಗ್ ಕೋರ್ಸ್‌’ನ ಶುಲ್ಕದಲ್ಲಿ ಯಾವುದೇ ಹೆಚ್ಚಳ ಮಾಡದೆ ಹಿಂದಿನ ವರ್ಷದ ಶುಲ್ಕವನ್ನೇ ಮುಂದುವರೆಸಲು ತೀರ್ಮಾನಿಸಲಾಗಿದೆ ಎಂದು ಎಂದು ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್‌.ಅಶ್ವತ್ ನಾರಾಯಣ್ ಅವರು ಇತ್ತೀಚಿಗೆ ಹೇಳಿಕೆ ಕೊಟ್ಟಿದ್ದರು.ಆದರೆ ಈಗ ಸರಕಾರ ಕೆಲವು ಪರೋಕ್ಷ ಕ್ರಮಗಳ ಮೂಲಕ ಶುಲ್ಕ ಹೆಚ್ಚಳಕ್ಕೆ ದಾರಿ ಮಾಡಿಕೊಡುವ ಆದೇಶವನ್ನು ಹೊರಡಿಸಿದೆ . ಇದರಿಂದಾಗಿ ಇಂಜಿನಿಯರಿಂಗ ಓದುವ ಕನಸು ಕಂಡಿರುವ ರಾಜ್ಯದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಕನಸು ಕನಸಾಗಿಯೇ ಉಳಿಯುವಂತಾಗಿದೆ.

ರಾಜ್ಯದ ಸರ್ಕಾರಿ ಹಾಗೂ ಖಾಸಗಿ ವಿಶ್ವವಿದ್ಯಾಲಯಗಳಲ್ಲಿನ ಸರಕಾರಿ ಕೋಟಾದ ಎಂಜಿನಿಯರಿಂಗ್ ಕೋರ್ಸ್ ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪ್ರಸ್ತಕ ಸಾಲಿನಿಂದ 83,526 ರೂ ಹಾಗೂ 90,060 ರೂ ಗಳಿಗೆ ನಿಗದಿಪಡಿಸಲಾಗಿದೆ . ಹಿಂದಿನ ವರ್ಷ ಈ ಶುಲ್ಕವು 58,806 ರೂ ಹಾಗೂ 65,340 ರೂ ( ವಿಶ್ವವಿದ್ಯಾಲಯ ಶುಲ್ಕವನ್ನು ಒಳಗೊಂಡಂತೆ ) ನಿಗದಿಪಡಿಸಲಾಗಿತ್ತು .ಆದರೆ ಸರ್ಕಾರವು 2021 – 2022 ನೇ ಸಾಲಿನಿಂದ 20,000 ರೂ ಕಾಲೇಜುಗಳ ಇತರ ಶುಲ್ಕ ಹಾಗೂ ಸ್ಕಿಲ್ ಲ್ಯಾಬ್ ಸೌಲಭ್ಯಕ್ಕಾಗಿ 10,000 ರೂ ರಿಂದ 20,000 ರೂಪಾಯಿವರೆಗೆ ಹೆಚ್ಚುವರಿ ಶುಲ್ಕ ವಸೂಲಿಗೆ ಸರ್ಕಾರ ಕಾಲೇಜುಗಳಿಗೆ ಅವಕಾಶ ನೀಡಿದೆ . ಇದರಿಂದಾಗಿ 40 ಸಾವಿರ ರೂಪಾಯಿ ಹೆಚ್ಚುವರಿಯಾಗಿ ವಿದ್ಯಾರ್ಥಿಯು ನೀಡಬೇಕಾಗಿರುತ್ತದೆ.

ಸರ್ಕಾರ ಈ ಹಿಂದಿನ ವರ್ಷಗಳಲ್ಲಿ ಕಾಲೇಜುಗಳಲ್ಲಿ ಈ ರೀತಿ ಹೆಚ್ಚಿನ ಶುಲ್ಕಗಳನ್ನು ಪಡೆಯದಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದ ಶುಲ್ಕ ನಿಯಂತ್ರಣ ಸಮಿತಿ ಯ ಮೂಲಕ ಕಡಿವಾಣ ಹಾಕಲಾಗಿತ್ತು . ಬೇಲಿಯೇ ಎದ್ದು ಹೊಲ ಮೇಲ್ದಂತೆ ಎನ್ನುವ ಹಾಗೆ ಸರ್ಕಾರವೇ ಈ ಎಲ್ಲ ಹೆಚ್ಚುವರಿ ಶುಲ್ಕಗಳನ್ನು ವಿದ್ಯಾರ್ಥಿಗಳಿಂದ ವಸೂಲಿ ಮಾಡಿ ಕಾಲೇಜುಗಳಿಗೆ ನೀಡುತ್ತಿದೆ . ಅದೇ ರೀತಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿನ ಶುಲ್ಕಗಳಿಗೂ ಹಾಗೂ ಸರ್ಕಾರಿ ಅನುದಾನಿತ ಇಂಜಿನಿಯರಿಂಗ್ ಕಾಲೇಜಿನ ಶುಲ್ಕಗಳಿಗೂ 40 ಸಾವಿರ ರೂಪಾಯಿಗಳವರೆಗೆ ಹೆಚ್ಚಳ ಮಾಡಲಾಗಿದೆ . ಕೋವಿಡ್ ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಪೋಷಕರಿಗೆ ಸರ್ಕಾರ ಪರೋಕ್ಷವಾಗಿ ಹೆಚ್ಚಳ ಮಾಡಿರುವ ಶುಲ್ಕ ಹೊರೆಯಾಗಲಿದೆ ಎಂದು ದೂರಿದರು.

ರಾಜ್ಯದಲ್ಲಿ ತಲೆದೂರಿರುವ ನೀಟ್ ಗೊಂದಲ ನಿವಾರಿಸುವುದಾಗಿ ಭರವಸೆ ನೀಡಿದ್ದ ಉನ್ನತ ಶಿಕ್ಷಣ ಇಲಾಖೆ ಸಿಟ ಗೊಂದಲಕ್ಕೆ ಕಾರಣವಾಗಿದೆ . ಇಲಾಖೆಯು ಗೊಂದಲವನ್ನು ಸೃಷ್ಟಿಸಿ ರಾಜ್ಯದ ವಿದ್ಯಾರ್ಥಿಗಳ ಕನಸುಗಳನ್ನು ಭಗ್ನ ಮಾಡಲು ಹೊರಟಿರುವುದನ್ನು ಎಬಿವಿಪಿ ಖಂಡಿಸುತ್ತದೆ . ಸರಕಾರ ತಕ್ಷಣವೇ ಸಿಇಟಿ ಕೌನ್ಸಿಲಿಂಗನಲ್ಲಿ ಭಾಗಿಯಾದವರಿಗೆ ಮೇಡಿಕಲ್ ನಲ್ಲೂ ಅವಕಾಶ ನೀಡಬೇಕು . ಇಂಜಿನೀಯರಿಂಗ್ ಸೀಟು ರದ್ದಾದರೆ ವಿದ್ಯಾರ್ಥಿಗಳ ಶುಲ್ಕ ಮೇಡಿಕಲ್ ಗೆ ವರ್ಗಾವಣೆ ಆಗುವಂತೆ ಕ್ರಮ ತೆಗೆದುಕೊಳ್ಳಬೇಕೆಂದು ಎಬಿವಿಪಿ ಸರಕಾರಕ್ಕೆ ಆಗ್ರಹಿಸುತ್ತದೆ.

ಬಡ- ಪ್ರತಿಭಾವಂತ ವಿದ್ಯಾರ್ಥಿಗಳ ಮತ್ತು ಕೋವಿಡ್ ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿರುವ ಪಾಲಕರ / ಪೋಷಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಸರಕಾರ ಶುಲ್ಕ ಹೆಚ್ಚಳಕ್ಕೆ ಹೊರಡಿಸಿರುವ ಆದೇಶವನ್ನು ತಕ್ಷಣಕ್ಕೆ ಹಿಂಪಡೆಯಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸರಕಾರಕ್ಕೆ ಆಗ್ರಹಿಸುತ್ತದೆ .

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಶರತ್ ಕಾರ್ಯಕರ್ತರಾದ ಮನೋಜ್ ,ವೀರೇಶ್, ರಾಜು, ಪೃಥ್ವಿ ಮತ್ತು ಕಾಲೇಜು ವಿದ್ಯಾರ್ಥಿಗಳಾದ ರಮೇಶ್ ,ಕಾರ್ತಿಕ್, ರಮ್ಯ, ದೀಪಿಕಾ, ಜ್ಯೋತಿ ಇತರರಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top