Connect with us

Dvg Suddi-Kannada News

ದಾವಣಗೆರೆ: ವೈದ್ಯಕೀಯ ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕಠಿಣ ಕ್ರಮಕ್ಕೆ ಎಬಿವಿಪಿ ಆಗ್ರಹ

ದಾವಣಗೆರೆ

ದಾವಣಗೆರೆ: ವೈದ್ಯಕೀಯ ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕಠಿಣ ಕ್ರಮಕ್ಕೆ ಎಬಿವಿಪಿ ಆಗ್ರಹ

ದಾವಣಗೆರೆ: ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿದವರ ವಿರುದ್ಧ ಕಠಿಣ ಕ್ರಮಕ್ಕೆ  ಆಗ್ರಹಿಸಿ,  ಎಬಿವಿಪಿ  ವತಿಯಿಂದ  ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.  ಈವೇಳೆ ಉಪವಿಭಾಗ ಅಧಿಕಾರಿಗಳ   ಮುಖಾಂತರ  ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ ಇಡೀ ದೇಶದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ ಎಂದು ಹೆಗ್ಗಳಿಕೆ ನಮ್ಮೆಲರಿಗೂ ಇದೆ. ಬಡ ಮತ್ತು ಪ್ರತಿಭಾವಂತ ಮಕ್ಕಳಿಗೆ ನ್ಯಾಯವಾಗಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸೀಟುಗಳು ದೊರೆಯಲಿ ಎಂಬ ಉದ್ದೇಶದಿಂದ ಸಿಇಟಿ ಪರೀಕ್ಷೆಗಳನ್ನು ಜಾರಿ ಮಾಡಲು ಆಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ರಾಜ್ಯದೆಲ್ಲೆಡೆ ಹೋರಾಟ ನಡೆಸಿ,ರಾಜ್ಯದಲ್ಲಿ ಸಿಇಟಿ ಪರೀಕ್ಷೆಗಳನ್ನು ಜಾರಿ ಮಾಡಿಸಿತ್ತು. ಆದರೆ ಇದೀಗ ಕರ್ನಾಟಕದ ಪ್ರತಿಷ್ಟಿತ ಮೆಡಿಕಲ್ ಕಾಲೇಜುಗಳ ಮೆಡಿಕಲ್ ಸೀಟ್ ಬ್ಲಾಕಿಂಗ್ ದಂಧೆಯನ್ನು ಸಾಕ್ಷಿ ಸಮೇತವಾಗಿ ಐಟಿ ಅಧಿಕಾರಿಗಳು ಬಯಲಿಗೆ ಎಳೆದಿದ್ದಾರೆ.

ಸೀಟುಗಳ ಮಾರಾಟದಿಂದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವ ಜೊತೆಗೆ ಆದಾಯ ತೆರಿಗೆ ಇಲಾಖೆಯ ಕಾಯ್ದೆಯೂ ಕೂಡ ಇಲ್ಲಿ ಉಲ್ಲಂಘನೆ ಆಗಿದೆ.  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿದವರ ವಿರುದ್ದ ಸರ್ಕಾರ ಯಾವುದೇ ಒತ್ತಡಗಳಿಗೆ ಮಣಿಯದೆ ಕಠಿಣ ಕ್ರಮ ತೆಗೆದುಕೊಳ್ಳಲು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಅಭಾವಿಪ ದಾವಣಗೆರೆ ಮಹಾನಗರ ಹೋರಾಟ ಪ್ರಮುಖ್ ವಿಜಯ್, ಸಂಪರ್ಕ ಪ್ರಮುಖ್ ದೊಡ್ಡೇಶ , ಮಾಧ್ಯಮ ಪ್ರಮುಖ್  ಇಟಗಿ ಆಕಾಶ್, ಅಭಾವಿಪ ಕಾರ್ಯಕರ್ತ ಕೊಟ್ರೇಶ್, ಅನಂತ , ವಿಶ್ವ , ಚಂದನ, ಭಾಗ್ಯಲಕ್ಷ್ಮಿ , ರಕ್ಷಿತಾ, ಇನ್ನಿತರರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top