ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಗೆ ಎನ್ ಎಂ ಆರ್ ನೀಡಲು 4 ಸಾವಿರ ಲಂಚ ಸ್ಚೀಕರಿಸುವಾಗಲೇ ಸಹಾಯಕ ತೋಟಗಾರಿಕಾ ಅಧಿಕಾರಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ.
ನ್ಯಾಮತಿ ತಾಲ್ಲೂಕು ಸಹಾಯಕ ತೋಟಗಾರಿಕೆ ಅಧಿಕಾರಿಯಾದ ಅಭಿಜಿತ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ಇವರ ಜತೆ ಸಿಬ್ಬಂದಿಗಳಾದ ಕರಿಬಸಪ್ಪ ಸಿಕ್ಕಿಬಿದ್ದ ಇನ್ನೊಬ್ಬ ಅಧಿಕಾರಿಯಾಗಿದ್ದಾರೆ. ತಾಲ್ಲೂಕಿನ ಒಡೆಯರ ಹತ್ತೂರು ಗ್ರಾಮದ ರೈತ ಮೋಹನ್ ಕುಮಾರ್ ಅವರಿಂದ 10 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. 4 ಸಾವಿರ ಕಚೇರಿಯಲ್ಲಿ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.



