ದಾವಣಗೆರೆ: ಭದ್ರಾ ನಾಲೆಯಲ್ಲಿ ಮುಳುಗಿ ಬಾಲಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಬಸವಾಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಜನತಾ ಪ್ರೌಢಶಾಲೆಯ ವಿದ್ಯಾರ್ಥಿ ಮಣಿಕಂಠ (16) ಮಾ.27 ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಮಧ್ಯಾಹ್ನ ಭದ್ರಾ ನಾಲೆಯಲ್ಲಿ ಸ್ನಾನಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ.
ಹೊನ್ನಾಳಿ ತಾಲ್ಲೂಕು ನೇರಲಗುಂಡಿ ಗ್ರಾಮದ ತಿಮ್ಮಪ್ಪ ಅವರ ಪುತ್ರ ಮಣಿಕಂಠ ಬುಧವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಭದ್ರಾ ನಾಲೆಗೆ ಸ್ನಾನಕ್ಕೆ ಹೋಗಿದ್ದಾಗ ಆಕಸ್ಮಿಕವಾಗಿ ಜಾರಿ ಬಿದ್ದಿದ್ದಾನೆ. ಹರೋಸಾಗರದ ಬಳಿ ಬಾಲಕನ ಮೃತದೇಹ ಪತ್ತೆಯಾಗಿದೆ. ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



