ದಾವಣಗೆರೆ: ನಗರ ದೇವತೆ ದುರ್ಗಾಂಬಿಕಾ ದೇವಿ ದೇವಸ್ಥಾನಕ್ಕೆ ತೆರಳುತ್ತಿದ್ದ. ವೇಳೆ ಮಹಿಳೆಯೊಬ್ಬರು ಆಟೋದಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ವಿನೋಬ ನಗರದಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಮೂಡಿ ಗ್ರಾಮದ ಸೌಭಾಗ್ಯ ಬಸವರಾಜಪ್ಪ (58) ಸಾವು ಕಂಡ ದುರ್ದೈವಿ. ವಿನೋಬ ನಗರದ ಒಂದೇ ಮುಖ್ಯರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ಮೊಮ್ಮಕ್ಕಳೊಂದಿಗೆ ದುರ್ಗಾಂಬಿಕಾ ದೇವಸ್ಥಾನಕ್ಕೆ ಆಟೋದಲ್ಲಿ ಹೋಗುವಾಗ ಈ ಘಟನೆ ಸಂಭವಿಸಿದೆ. ಆಟೋದಿಂದ ಕೆಳಗೆ ಬಿದ್ದ ಪರಿಣಾಮ ತೀವ್ರ ರಕ್ತಸ್ರಾವವಾಗಿದ್ದು, ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.



