Connect with us

Dvgsuddi Kannada | online news portal | Kannada news online

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ‌ ಕೆರೆಯಲ್ಲಿ ಮುಳುಗಿದ ನಂದಿನಿ ಹಾಲಿನ ವಾಹನ

ಚನ್ನಗಿರಿ

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ‌ ಕೆರೆಯಲ್ಲಿ ಮುಳುಗಿದ ನಂದಿನಿ ಹಾಲಿನ ವಾಹನ

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ನಂದಿನಿ ಹಾಲಿನ ವಾಹನವೊಂದು ಕೆರೆಯಲ್ಲಿ ಮುಳುಗಿದ ಘಟನೆ ನಡೆದಿದೆ.

ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದ ಕೆರೆಯಲ್ಲಿ ಈ ಘಟನೆ ನಡೆದಿದೆ. ನಂದಿನ ಹಾಲಿನ ಶಾಪ್ ಗಳಿಗೆ ಹಾಲು ಪೂರೈಸುತ್ತಿದ್ದ ವಾಹನ ಇದಾಗಿದೆ. ಈ ವಾಹನದೊಂದಿಗೆ 500ಕ್ಕೂ ಅಧಿಕ ಲೀಟರ್ ಹಾಲು ನೀರು ಪಾಲಾಗಿದೆ. ಘಟನೆಯಲ್ಲಿ ಚಾಲಕ ಮತ್ತು ಕ್ಲೀನರ್ ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈವಾಹನ ದೇವರಹಳ್ಳಿ ಅಂಗಡಿಗಳಿಗೆ ಹಾಲು ವಿತರಿಸಲು ನಲ್ಲೂರು ಕಡೆ ಹೊರಟಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕೆರೆಯಲ್ಲಿ ಮುಳುಗಿದೆ. ಸಂತೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

To Top