ದಾವಣಗೆರೆ: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಮೆದಿಕೆರೆನಹಳ್ಳಿ ಸಮೀಪ ವಾಹನಕ್ಕೆ ಕಾರ್ ಡಿಕ್ಕಿಯಾಗಿ ಕಾಂಗ್ರೆಸ್ ಮುಖಂಡ ಚಿಕ್ಕಮ್ಮನಟ್ಟಿ ದೇವೇಂದ್ರಪ್ಪ ತಲೆಗೆ ಗಂಭೀರ ಗಾಯವಾಗಿದೆ.
ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಟಾಟಾ ಏಸ್ ವಾಹನಕ್ಕೆ ಕಾರ್ ಡಿಕ್ಕಿಯಾಗಿದೆ. ದೇವೇಂದ್ರಪ್ಪ ಅವರಿಗೆ ಜಗಳೂರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಗಳೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ದೇವೇಂದ್ರಪ್ಪ ಕಳೆದ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು.