ದಾವಣಗೆರೆ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೇಬೆನ್ನೂರು ಪುರಸಭೆಯ 22 ನೇ ವಾರ್ಡ್ ಸದಸ್ಯ ಅಬ್ದುಲ್ ಮಜೀದ್ (53) ಸಾವನ್ನಪ್ಪಿದ ಘಟನೆ ನಡೆದಿದೆ.
ಭಾನುವಾರ ಭಾರತ್ ಜೋಡೋ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಲೇಬೆನ್ನೂರಿಗೆ ವಾಪಸ್ ಆಗಿದ್ದ ವೇಳೆ ರಿಲಯನ್ಸ್ ಪೆಟ್ರೋಲ್ ಬಂಕ್ ಬಳಿ ಬೈಕ್ ಗೆ ನಾಯಿ ಅಡ್ಡ ಬಂದಿದ್ದರಿಂದ ಬೈಕ್ ನಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಸ್ಪಂದಿಸದೇ ಮಂಗಳವಾರ ಸಾವನ್ನಪ್ಪಿದ್ದಾರೆ.



