ದಾವಣಗೆರೆ: ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ತಡ ರಾತ್ರಿ ರೇಷ್ಮೆ ಗೂಡು ಸಾಗಿಸುತ್ತಿದ್ದ ವಾಹನದ ಟಯರ್ ಬ್ಲಾಸ್ಟ್ ಆದ ಪರಿಣಾಮ ಕಾರು, ಮಿನಿ ಬಸ್, ಟಾಟಾ ಎಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಓರ್ವ ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ.
ರೈತರು ರೇಷ್ಮೆ ಗೂಡು ಮಾರಾಟ ಮಾಡಲು ಟಾಟಾ ಎಸ್ ವಾಹನದಲ್ಲಿ ರಾಮನಗರಕ್ಕೆ ಹೊರಟಿದ್ದರು. ಮಾರ್ಗ ಮಧ್ಯೆ ಟಯರ್ ಬ್ಲಾಸ್ಟ್ ಆಗಿದೆ. ಇದರ ಪರಿಣಾಮ ವಾಹನ ಡಿವೈಡರ್ ಡಿಕ್ಕಿ ಹೊಡೆದಿದೆ. ಬೆಂಗಳೂರು ಕಡೆಯಿಂದ ಬರುತ್ತಿದ್ದ ಬಸ್ ಹಾಗೂ ಕಾರಿಗೆ ಡಿಕ್ಕಿ ಹೊಡೆದಿದೆ. ವಾಹಗಳು ಜಖಂಗೊಂಡಿವೆ.
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಗುತ್ತಾಲ ಗ್ರಾಮದ ಹನುಮಂತಪ್ಪ (58) ಮೃತ ರೈತರಾಗಿದ್ದಾರೆ. ಐವರ ಕಾಲಿನ ಮೂಳೆ ಮುರಿದಿದ್ದು, ಒಟ್ಟು 9 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



