ದಾವಣಗೆರೆ: ವಿಂಡ್ ಫ್ಯಾನ್ ಕಂಪನಿಗೆ ಸೇರಿದ ಲಾರಿ ಡಿಕ್ಕಿ, ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬುಳ್ಳನಳ್ಳಿ ಬಳಿ ನಡೆದಿದೆ. ಲಾರಿ ಡಿಕ್ಕಿಯಾಗಿ ಬೈಕ್ನಲ್ಲಿ ತೆರಳ್ತಿದ್ದ ಯುವ ರೈತ ಮೂರ್ತ್ಯಪ್ಪ(36) ಮೃತಪಟ್ಟಿದ್ದಾರೆ.
ಬೈಕ್ನಲ್ಲಿ ರೈತ ಮೂರ್ತ್ಯಪ್ಪ ಜಮೀನಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮಣ್ಣು ಸಾಗಣೆ ಮಾಡುತ್ತಿದ್ದ ವಿಂಡ್ ಫ್ಯಾನ್ ಕಂಪನಿಗೆ ಸೇರಿದ ಲಾರಿ, ರೈತನಿಗೆ ಡಿಕ್ಕಿ ಹೊಡೆದಿದೆ. ಜಗಳೂರು ತಾಲೂಕಿನಲ್ಲಿ ವಿಂಡ್ ಫ್ಯಾನ್ ಕಂಪನಿ ಲಾರಿಗಳ ಹಾವಳಿ ಹೆಚ್ಚಾಗಿದೆ ಎಂದು ಗ್ರಾಮಸ್ಥರು ದೂರು ನೀಡಿದ್ದಾರೆ, ಆದರೆ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ.ಮಣ್ಣು ಸಾಗಣೆಗೆ ಪ್ರತಿ ತಿಂಗಳು ನೂರಾರು ಲಾರಿಗಳು ಸಂಚಾರ ಮಾಡುತ್ತಿದೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಪ್ರಕರಣದ ಬಗ್ಗೆ ಜಗಳೂರು ಪೊಲೀಸ್ ದೂರು ದಾಖಲಿಸಿಕೊಂಡಿದ್ದಾರೆ.