Connect with us

Dvgsuddi Kannada | online news portal | Kannada news online

ದಾವಣಗೆರೆ: ಮಲೇಬೆನ್ನೂರು ಬಳಿ ಟೈಲ್ಸ್ ಸಾಗಣಿಕೆಯ ಭಾರೀ ಗಾತ್ರದ ಲಾರಿ ಪಲ್ಟಿ

IMG 20221214 124722

ಹರಿಹರ

ದಾವಣಗೆರೆ: ಮಲೇಬೆನ್ನೂರು ಬಳಿ ಟೈಲ್ಸ್ ಸಾಗಣಿಕೆಯ ಭಾರೀ ಗಾತ್ರದ ಲಾರಿ ಪಲ್ಟಿ

ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೇಬೆನ್ನೂರು ಬಳಿ ಟೈಲ್ಸ್ ಸಾಗಣೆ ಮಾಡುತ್ತಿದ್ದ ಬೃಹತ್ ಗಾತ್ರದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ರಸ್ತೆ ರಾಜ್ಯ ಹೆದ್ದಾರಿ ಆಗಿದ್ದರೂ ಕಿರಿದಾಗಿದ್ದು, ಭಾರೀ ಗಾತ್ರದ ಎರಡು ಲಾರಿಗಳು ಮುಖಾಮುಖಿ ಓಡಾಡಲು ಕಷ್ಟವಾಗಿದೆ. ಹೀಗಾಗಿ ಇಂತಹ ಅಪಘಾತಗಳು ಈ ರಸ್ತೆಯಲ್ಲಿ ಸಾಮಾನ್ಯ ಎನ್ನುವಂತಾಗಿದೆ. ಚಾಲಕ, ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗುಜರಾತ್ ನಿಂದ ಟೈಲ್ಸ್ ಸಾಗಣೆ ಮಾಡುತ್ತಿತ್ತು. ಮಂಜು, ಮಳೆ ನಡುವೆ ಲಾರಿ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಲಾರಿ ತೆರವಿನ ವೇಳೆ ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರಕ್ಕೆ ಅಡ್ಡಿಯಾಗಿತ್ತು.ಲಾರಿ ಪಲ್ಟಿಯಾದ ವೇಳೆ ಅಕ್ಕಪಕ್ಕ ಯಾವುದೇ ವಾಹನ ಇರಲಿಲ್ಲ. ಹೀಗಾಗಿ ಯಾವುದೆ ಅಪಾಯ ಸಂಭವಿಸಿಲ್ಲ. ಲಕ್ಷಾಂತರ ರೂಪಾಯಿ ಬೆಲೆಬಾಳುವ ಟೈಲ್ಸ್‌ ಒಡೆದು ಹೋಗಿವೆ. ಈ ರಸ್ತೆ ಕಿರಿದಾಗಿದ್ದು, ಎರಡು ಭಾರಿ ಗಾತ್ರದ ವಾಹನ ಸಂಚಾರ ಕಷ್ಟಕರವಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಿಹರ

ದಾವಣಗೆರೆ

Advertisement
Advertisement Enter ad code here

Title

To Top