ದಾವಣಗೆರೆ: ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿ 9 ಮಂದಿ ಗಾಯಗೊಂಡ ಘಟನೆ ದಾವಣಗೆರೆ ತಾಲೂಕಿನ ದೊಡ್ಡಬಾತಿ ಬಳಿ ನಡೆದಿದೆ.
ಎದುರಿಗೆ ಬಂದ ಬೈಕ್ ಗೆ ದಾರಿ ಬಿಡಲು ಹೋಗಿ ಕಾರು ಚಾಲಕ ಡೈವೈಡರ್ ಗೆ ಡಿಕ್ಕಿ ಹೊಡೆದಿದ್ದಾನೆ. ಒಂದು ಮಗು, ಚಾಲಕ ಹಾಗೂ ಏಳು ಮಹಿಳೆಯರು ಗಾಯಗೊಂಡಿದ್ದಾರೆ. ಇಬ್ಬರು ಮಹಿಳೆಯರಿಗೆ ಗಂಭೀರ ಗಾಯಗಳಾಗಿವೆ. ಎಲ್ಲ ಗಾಯಾಳುಗಳನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆ ಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಗಾಯಾಳು ಕೋಲಾರ ನಗರ ನಿವಾಸಿಗಳಾಗಿದ್ದಾರೆ. ಕೋಲಾರದಿಂದ ಶಿವಮೊಗ್ಗ ಜಿಲ್ಲೆಯ ಸಿಗಂಧೂರ ಚೌಡೇಶ್ವರಿ ದರ್ಶನಕ್ಕೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ



