ದಾವಣಗೆರೆ: ಅತಿ ವೇಗವಾಗಿ ಬಂದ ಬೃಹತ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ.ದಾವಣಗೆರೆ ತಾಲ್ಲೂಕಿನ ಹದಡಿ ಸಮೀಪ ಈ ಘಟನೆ ನಡೆದಿದೆ. ಮಣ್ಣು ತುಂಬಿಕೊಂಡು ವೇಗವಾಗಿ ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ತೆಂಗಿನ ಮರಕ್ಕೆ ಡಿಕ್ಕಿಯಾಗಿದೆ. ಚಾಲಕ ಮತ್ತು ಕ್ಲಿನರ್ ಗೆ ಗಾಯವಾಗಿದೆ. ಈ ಬಗ್ಗೆ ಹದಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



