ದಾವಣಗೆರೆ: ಕೂಲಿ ಕಾರ್ಮಿಕ ಮಹಿಳೆಯರು ಕೆಲಸಕ್ಕೆ ತೆರಳುತ್ತಿದ್ದ ವೇಳೆ ಆಟೋ ಪಲ್ಟಿಯಾಗಿ 6ಕ್ಕೂ ಹೆಚ್ಚು ಮಹಿಳೆಯರು ಗಾಯಗೊಂಡಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಬೆಣ್ಣಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ಗಾಯಾಳುಗಳನ್ನು ಜಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.ಅಣಬೂರಿನಿಂದ ಚಿತ್ರದುರ್ಗದ ಚಿಕ್ಕಪ್ಪನಹಳ್ಳಿ ಗ್ರಾಮಕ್ಕೆ ಕೂಲಿ ಕೆಲಸಕ್ಕೆ ಮಹಿಳೆಯರು ತೆರಳುತ್ತಿದ್ದಾಗ ಎದುರಿನಿಂದ ಬಂದ ಕಾರನ್ನು ತಪ್ಪಿಸಲು ಹೋಗಿ ಆಟೋ ಚಾಲಕನ ನಿಯಂತ್ರಣ ತಪ್ಪಿದೆ. ರಸ್ತೆ ಪಕ್ಕದಲ್ಲಿ ಆಟೋ ಪಲ್ಟಿಯಾಗಿ ಬಿದ್ದಿದೆ.ಜಗಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



