ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಶಿವಮೊಗ್ಗ-ಶಿಕಾರಿಪುರ ರಸ್ತೆಯ ಹೊಸ ಜೋಗ ಗ್ರಾಮದ ಬಳಿ ಮಿನಿ ಲಾರಿ ಪಲ್ಟಿಯಾಗಿ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಅಮ್ಮಿಯಾ (37) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ತೀವ್ರ ಪೆಟ್ಟು ಬಿದ್ದಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಅತಿವೇಗದ ಚಾಲನೆಯಿಂದಾಗಿ ವಾಹನ ಪಲ್ಟಿಯಾಗಿದೆ. ವಾಹನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಇದ್ದರು. ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿದೆ. ಉಳಿದವರನ್ನು ಶಿವಮೊಗ್ಗ ಆಸ್ಪತ್ರೆಗೆ
ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.