ದಾವಣಗೆರೆ: ಸೇತುವೆಗೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ. ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಸವಳಂಗ ರಸ್ತೆಯ ಹಿರೇಹಳ್ಳದ ಸೇತುವೆ ಬಳಿ ಈ ಘಟನೆ ನಡೆದಿದೆ.
ಶಿವಮೊಗ್ಗ ತಾಲ್ಲೂಕಿನ ರಟ್ಟಿಹಳ್ಳಿಯ ಅಜಯ್ (24) ಮೃತಪಟ್ಟ ಯುವಕನಾಗಿದ್ದಾನೆ. ಕೃಷಿ ಪರಿಕರ ತೆಗೆದುಕೊಂಡು ಹೋಗಲು ನ್ಯಾಮತಿಗೆ ಬಂದಿದ್ದು, ವಾಪಸ್ ಹೋಗುವಾಗ ಅತೀ ವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿದೆ. ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದ್ದರಿಂದ ಅಜಯ್ ಸಾವನ್ನಪ್ಪಿದ್ದಾನೆ ಎಂದು ಮೃತರ ತಂದೆ ಹೇಳಿದ್ದಾರೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



