ದಾವಣಗೆರೆ: ನಗರದ ಹೊರ ವಲಯದ ಶಾಮನೂರು ಬಳಿ ಲಾರಿ ಮತ್ತು ಅಪ್ಪಿ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದೆ. ಓರ್ವ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಅತಿ ವೇಗದಿಂದ ಬಂದ ಅಪ್ಪಿ ಆಟೋ ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಆಟೋದಲ್ಲಿದ್ದ ಗಂಗಮ್ಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಲಾರಿ ರಭಸವಾದ ಹೊಡೆತಕ್ಕೆ ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.