ದಾವಣಗೆರೆ: ಹಿಂಬದಿಯಿಂದ ಬಂದ ಖಾಸಗಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಮಾದಾಪುರ ಕ್ರಾಸ್ ಬಳಿ ಸಂಭವಿಸಿದೆ. ಮೃತರು ಶಿವಮೊಗ್ಗ ನಗರದವರು ಎಂದು ತಿಳಿದು ಬಂದಿದೆ.
ಪೂರ್ಯಾ ನಾಯ್ಕ್ (35) ಮೋಹನ್ ನಾಯ್ಕ್ (30 ಸಾವನ್ನಪ್ಪಿದವರಾಗಿದ್ದಾರ. ಇವರು ಭದ್ರಾವತಿ ಕಡೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಚನ್ನಗಿರಿ ರಸ್ತೆಯಲ್ಲಿ ಸಾಗುವ ವೇಳೆ ಯಮ ರೂಪದಲ್ಲಿ ಬಂದ ಖಾಸಗಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದಾನೆ.
ಮೃತರು ಶಿವಮೊಗ್ಗ ನಗರದ ವಿನೋಭನಗರದ ನಿವಾಸಿಗಳಾಗಿದ್ದಾರೆ. ಅಪಘಾತದಿಂದ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ಹದಡಿ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.



