ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿದಮಹಾರಾಷ್ಟ್ರ ಮೂಲದ ಲಾರಿಯೊಂದು ದಾವಣಗೆರೆ ತಾಲ್ಲೂಕಿನ ಸಮೀಪದ ಹೆಬ್ಬಾಳು ಟೋಲ್ ಕೌಂಟರ್ ಗೆ ಡಿಕ್ಕಿ ಹೊಡೆದಿದೆ. ಇದರಿಂದ ಟೋಲ್ ಕೌಂಟರ್ ಗ್ಲಾಸ್ ಪುಡಿ ಪುಡಿಯಾಗಿದ್ದು, ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಎಂದಿನಂತೆ ಟೋಲ್‌ನಲ್ಲಿ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ, ಲಾರಿ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಬ್ಯಾರಿಕೇಡ್ ತಳ್ಳಿಕೊಂಡು ಲಾರಿ ಟೋಲ್ ಗೇಟ್‌ಗೆ ಡಿಕ್ಕಿ ಹೊಡೆದಿದೆ. ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಂಪ್ಯೂಟರ್ ಪೂರ್ಣ ಹಾಳಾಗಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.



