ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಲೋಡ್ ಆಗಿದ್ದ ಲಾರಿಯೊಂದು ಡಿಕ್ಕಿ ಹೊಡಿದೆ. ಈ ಭೀಕರ ಅಪಘಾತದಲ್ಲಿ ಲಾರಿ ಡ್ರೈವರ್ ಗೆ ಗಂಭೀರ ಗಾಯಗಳಾಗಿವೆ. ಈ ಘಟನೆ ಜಗಳೂರು ತಾಲ್ಲೂಕಿನ ಹಿರೇಅರಕೆರೆ ಗ್ರಾಮದ ಬಳಿ ನಡೆದಿದೆ.
ಹಿರೇಅರಕೆರೆ ಗ್ರಾಮದ ಹತ್ತಿರ ಲಾರಿ ಬೇವಿನ ಮರಕ್ಕೆ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಲಾರಿ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಲಾರಿ ಡ್ರೈವರ್ ಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ಹಾಗೂ ಪೊಲೀಸರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ನಡೆದ ಸ್ಥಳಕ್ಕೆ ಹೊಯ್ಸಳ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಬಿಳಿಚೋಡು ಠಾಣೆವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



