Connect with us

Dvgsuddi Kannada | online news portal | Kannada news online

ದಾವಣಗೆರೆ: ಓಮಿನಿ-ಭತ್ತದ ಹುಲ್ಲಿನ ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಮೂವರು ಸಾವು…!!

ಚನ್ನಗಿರಿ

ದಾವಣಗೆರೆ: ಓಮಿನಿ-ಭತ್ತದ ಹುಲ್ಲಿನ ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಮೂವರು ಸಾವು…!!

ದಾವಣಗೆರೆ: ಓಮಿನಿ ಕಾರು-ಭತ್ತದ ಹುಲ್ಲಿನ ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಗುಳ್ಳೇಹಳ್ಳಿ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ  ನಡೆದಿದೆ.

ಚನ್ನಗಿರಿ ತಾಲ್ಲೂಕಿನ ನಾರಶೆಟ್ಟಿಹಳ್ಳಿ ಗ್ರಾಮದ ಒಂದೇ ಮನೆಯ ರುದ್ರೇಶಪ್ಪ (64), ಮಲ್ಲಿಕಾರ್ಜುನ್ (62) ಹಾಗೂ ಗಂಗಮ್ಮ (80) ಮೃತಪಟ್ವರು. ರತ್ನಮ್ಮ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ವಸಂತೇಬೆನ್ನೂರು ಕಡೆಯಿಂದ ಚನ್ನಗಿರಿ ಕಡೆಗೆ ಬರುತ್ತಿದ್ದ ಓಮಿನಿ, ಇನ್ನೊಂದು ಕಡೆಯಿಂದ ಭತ್ತದ ಹುಲ್ಲನ್ನು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

Advertisement

ದಾವಣಗೆರೆ

Advertisement
To Top