ದಾವಣಗೆರೆ: ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರು ಗ್ರಾಮದಲ್ಲಿ ನಡೆದಿದೆ.
ದಾವಣಗೆರೆ ತಾಲೂಕಿನ ದ್ಯಾಮೇನಹಳ್ಳಿ ಗ್ರಾಮದ ಸಂತೋಷ (26) ಮೃತಪಟ್ಟವರು.ಬೈಕ್ ಹಿಂಬದಿ ಸವಾರನಿಗೂ ತೀವ್ರವಾಗಿ ಗಾಯವಾಗಿವೆ. ಕಾರ್ ನಲ್ಲಿದ್ದ ಇಬ್ಬರಿಗೆ ಸಣ್ಣ ಪುಟ್ಟಗಾಯಗಳಾಗಿವೆ. ಚನ್ನಗಿರಿ ಕಡೆಯಿಂದ ಸಂತೆಬೆನ್ನೂರಿಗೆ ಬರುತ್ತಿದ್ದ ಕಾರು ಹಾಗೂ ಎದುರು ಬರುತ್ತಿರುವ ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡಿವೆ. ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆ ಪಕ್ಕದ ಗುಂಡಿಗೆ ಬಿದ್ದಿದೆ.
ಕಾರು ಚಿಕ್ಕಮಗಳೂರು ಮೂಲದ್ದು ಎಂದು ತಿಳಿದು ಬಂದಿದೆ.ಗಾಯಾಳುಗಳನ್ನು ಸಂತೆಬೆನ್ನೂರ ಹಾಗೂ ಚನ್ನಗಿರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಂತೆಬೆನ್ನೂರು ಠಾಣೆಯಲ್ಲಿ ಘಟನೆ ನಡೆದಿದೆ.