ದಾವಣಗೆರೆ; ಜಿಲ್ಲೆಯ ಶಿವಮೊಗ್ಗ-ಹರಿಹರ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟಿಪ್ಪರ್ ಲಾರಿ ಬೈಕ್ ಗೆ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಗ್ರಾಮದ ಹರಿಹರ- ಶಿವಮೊಗ್ಗ ರಸ್ತೆಯಲ್ಲಿ ಘಟನೆ ನಡೆದಿದೆ. ಟಿಪ್ಪರ್ ಲಾರಿ ಗುದ್ದಿದ ರಭಸಕ್ಕೆ ಬೈಕ್ ಸವಾರರು ಮೃತಪಟ್ಟಿದ್ದಾರೆ. ಮೃತರನ್ನು ರಾಕೇಶ್ (22) ಹಾಗೂ ಆಕಾಶ್ (23) ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



