ದಾವಣಗೆರೆ: ಪಾದಚಾರಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಗೋವಿನಕೋವಿ ಗ್ರಾಮದ ಬಸವರಾಜಪ್ಪ(60) ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಸುರಹೊನ್ನೆ ಗ್ರಾಮದ ಹೊನ್ನಾಳಿ-ಶಿವಮೊಗ್ಗ ಮುಖ್ಯರಸ್ತೆಯಲ್ಲಿ ನಡೆದಿದೆ.
ಬಸವರಾಜಪ್ಪ ಮಗಳ ಮನೆಗೆ ಬಂದಿದ್ದು, ಜಮೀನು ನೋಡಿಕೊಂಡು ಬರಲು ಹೋಗುತ್ತಿದ್ದ ವೇಳೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಚಾಲಕ ನಿರ್ಲಕ್ಷ್ಯದಿಂದ ಕೃತ್ಯ ನಡೆದಿದೆ ಎಂದು ಮೃತರ ಪುತ್ರಿ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.