ದಾವಣಗೆರೆ: ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮುದಿಗೆರೆ ಗ್ರಾಮದಲ್ಲಿ ನಡೆದಿದೆ. ಗಣೇಶ್ (16), ಹೇಮಂತ್ (15) ಮೃತ ಬಾಲಕರು ಎಂದು ಗುರುತಿಸಲಾಗಿದೆ.
ಈ ಇಬ್ಬರು ಬಾಲಕರಲ್ಲಿ ಗಣೇಶ್ ಎಂಬ ಬಾಲಕ ನಿನ್ನೆಯಷ್ಟೇ ಬಂದಿದ್ದ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನದಲ್ಲಿ ತೇರ್ಗಡೆಯಾಗಿದ್ದ. ತಾಲ್ಲಾಉಕಿನ ದೋಣಿಹಳ್ಳಿ ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದ. ಹೇಮಂತ್ 9ನೇ ತರಗತಿ ತೇರ್ಗಡೆಗೊಂಡು ಎಸ್ಸೆಸ್ಸೆಲ್ಸಿಗೆ ದಾಖಲಾಗಬೇಕಿತ್ತು. ಈ ದುರ್ಘಟನೆ ಕಂಡು ಗ್ರಾಮದಲ್ಲಿ ಮಕ್ಕಳ ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು.