ಡಿವಿಜಿ ಸುದ್ದಿ, ದಾವಣಗೆರೆ: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ದಾವಣಗೆರೆ ಹೆಮ್ಮೆಯ ಕಲಾವಿದ ಹಿರಿಯ ರಂಗಕರ್ಮಿ ಕೊಡಗನೂರು ಜಯಕುಮಾರ್ (70) ಇಂದು ನಿಧನ ಹೊಂದಿದ್ದಾರೆ.
ದಾವಣಗೆರೆಯ ಬಾಪೂಜಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ತಮ್ಮ ನಟನೆ ಮೂಲಕ ಜೂನಿಯರ್ ರಾಜಕುಮಾರ್ ಎಂದು ಖ್ಯಾತಿ ಗಳಿಸಿದ್ದರು. ಕಿರುತೆರೆಯಲ್ಲಿ ಪಾಂಡು ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದರು. ವೃತ್ತಿ ರಂಗಭೂಮಿಯಲ್ಲಿ ಅನೇಕ ಪೌರಾಣಿಕ ಪಾತ್ರಗಳಿಗೆ ಜೀವ ತುಂಬಿದ್ದರು.

ದಾವಣಗೆರೆ ಜಿಲ್ಲೆಯ ಹಮ್ಮೆಯ ಕಲಾವಿದರಾಗಿದ್ದ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರ ಅಗಲಿಕೆಯಿಂದ ಜಿಲ್ಲೆ ಜನತೆ ಅದ್ಭುತ ಕಲಾವಿದರನ್ನು ಕಳೆದುಕೊಂಡಿದ್ದಾರೆ. ಜಯಕುಮಾರ್ ಅಗಲಿಕೆಗೆ ಜಿಲ್ಲೆಯ ಕಲಾವಿದರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.



