Connect with us

Dvgsuddi Kannada | online news portal | Kannada news online

ದಾವಣಗೆರೆ: ಪರಿಸರ ಸ್ನೇಹಿ, ವಿಷಮುಕ್ತ ಭತ್ತ ಕುರಿತು ತರಬೇತಿ

ಪ್ರಮುಖ ಸುದ್ದಿ

ದಾವಣಗೆರೆ: ಪರಿಸರ ಸ್ನೇಹಿ, ವಿಷಮುಕ್ತ ಭತ್ತ ಕುರಿತು ತರಬೇತಿ

ದಾವಣಗೆರೆ: ಕೃಷಿ ಇಲಾಖೆಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಕೃಷಿ ಕೇಂದ್ರದಲ್ಲಿ 2021 ರ ಜನವರಿ 04 ರಂದು  ಪರಿಸರ ಸ್ನೇಹಿ ವಿಷಮುಕ್ತ ಭತ್ತ ವಿಷಯದ ಬಗ್ಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.  ಈ ಕಾರ್ಯಕ್ರಮದಲ್ಲಿ ನುರಿತ ಹಾಗೂ ಅನುಭವಿ ವಿಜ್ಞಾನಿಗಳು, ರೈತರೊಂದಿಗೆ ಸಂವಾದ ನಡೆಸಲಿದ್ದಾರೆ.

ಆಧುನಿಕ ಕೃಷಿಯಲ್ಲಿ ಅಧಿಕ ಇಳುವರಿ ಪಡೆಯುವ ತವಕದಲ್ಲಿ ಅವೈಜ್ಞಾನಿಕ ಹಾಗೂ ಶಿಫಾರಸ್ಸಿಗಿಂತ ಹೆಚ್ಚು ರಸಗೊಬ್ಬರ ಮತ್ತು ಪೀಡೆನಾಶಕಗಳ ಬಳಕೆಯಿಂದಾಗಿ, ಕೃಷಿಗೆ ಮಾಡುವ ವೆಚ್ಚವು ಅಧಿಕವಾಗಿ ಪಡೆಯುವ ಲಾಭಾಂಶ ಕಡಿಮೆಯಾಗಿದೆ. ಆಹಾರವು ವಿಷಯುಕ್ತವಾಗುವುದರ ಜೊತೆಗೆ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಈ ದಿಶೆಯಲ್ಲಿ ಪ್ರಸ್ತುತವಾಗಿ ಅನುಸರಿಸುತ್ತಿರುವ ಆಧುನಿಕ ಕೃಷಿಯಲ್ಲಿ ಬದಲಾವಣೆಯ ಅವಶ್ಯಕತೆಯಿದ್ದು, ಜೈವಿಕ ವಿಘಟನೆಹೊಂದದ ರಾಸಾಯನಿಕಗಳನ್ನು ಬಳಸದೇ ಖರ್ಚನ್ನು ಮಿತಗೊಳಿಸಿ, ಪರಿಸರ ಸ್ನೇಹಿಯಾಗಿ ವಿಷಮುಕ್ತ ಆಹಾರ ಪಡೆಯುವುದು ಇಂದಿನ ಅಗತ್ಯವಾಗಿದ್ದು ಈ ನಿಟ್ಟಿನಲ್ಲಿ ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಪ್ರಯುಕ್ತ ಆಸಕ್ತಿಯುಳ್ಳ ರೈತ ಬಾಂಧವರು ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಕಾಡಜ್ಜಿಯ ಕಚೇರಿಯಲ್ಲಿ ತಮ್ಮ ಹೆಸರನ್ನು ಜ.04 ರೊಳಗೆ ನೋಂದಾಯಿಸಿಕೊಳ್ಳುವುದು ಅಥವಾ ಸಹಾಯಕ ಕೃಷಿ ನಿರ್ದೇಶಕರು, ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಕಾಡಜ್ಜಿ ಇವರ ದೂ.ಸಂ: 8277931242 ಅಥವಾ 8277928964 ರಲ್ಲಿ ನೋಂದಾಯಿಸಿಕೊಳ್ಳಬೇಕೆಂದು ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ ಚಿಂತಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top