ದಾವಣಗೆರೆ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಅ.4 ಮತ್ತು ಅ.5 ರಂದು ಬೆ. 10 ರಿಂದ ಸಂಜೆ 05 ಗಂಟೆಯವರೆಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರಮಂದಿರದ ಎದುರಿನ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಆಸಕ್ತ ರೈತರು, ಮಹಿಳೆಯರು, ನಿರುದ್ಯೋಗ ಯುವಕ ಮತ್ತು ಯುವತಿಯರು ತರಬೇತಿಯ ಕಾರ್ಯಕ್ರಮದ ಅನುಕೂಲ ಪಡೆಯಬಹುದು. ತರಬೇತಿಗೆ ಹಾಜರಾಗುವವರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್‍ಪೋರ್ಟ್ ಸೈಜ್ ಫೋಟೊ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ್ ತರಬೇಕು. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ದಾವಣಗೆರೆ ದೂರವಾಣಿ ಸಂಖ್ಯೆ 08192-233787 ಗೆ ಸಂಪರ್ಕಿಸಬಹುದು ಎಂದು ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
		 
		 
		 
		 
			
 
                                
                             
