ದಾವಣಗೆರೆ: ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರ ದಾವಣಗೆರೆ ಹಾಗೂ ಕೃಷಿ ಇಲಾಖೆ ಜಗಳೂರು ಸಂಯುಕ್ತಾಶ್ರಯದಲ್ಲಿ ಶೇಂಗಾ ಬೆಳೆಯ ಸಮಗ್ರ ನಿರ್ವಹಣಾ ಕ್ರಮಗಳ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಜಗಳೂರು ತಾಲೂಕಿನ ಸೋಮನಹಳ್ಳಿ ಗ್ರಾಮದ ರೈತರಿಗೆ ಹಮ್ಮಿಕೊಳ್ಳಲಾಗಿತ್ತು.
ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ತಜ್ಞ ಮಲ್ಲಿಕಾರ್ಜುನ್ ಮಾತನಾಡಿ, ರಾಷ್ಟ್ರೀಯ ಎಣ್ಣೆಕಾಳು ಯೋಜನೆ ಅಡಿಯಲ್ಲಿ ಹುಚ್ಚ ಗ್ರಾಮಗಳ ಮುಂಚೂಣಿ ಪ್ರಾತ್ಯಕ್ಷಿಕೆಯನ್ನು ಜಗಳೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಶೇಂಗಾ ಬೆಳೆಯ ನವೀನ ತಳಿಯಾದ G2-52 ಪರಿಚಯ ಹಾಗೂ ಜೈವಿಕ ಗೊಬ್ಬರಗಳಿಂದ ಬೀಜೋಪಚಾರ ಹಾಗೂ ಟ್ರೈಕೋಡರ್ಮಾ ಬಳಕೆಯ ಬಗ್ಗೆ ಸಂಪೂರ್ಣವಾಗಿ ರೈತರಿಗೆ ಪದ್ಧತಿಯ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು. ಬಿತ್ತನೆ ಸಮಯದಲ್ಲಿ 200 ಕೆಜಿ ಜಿಪ್ಸಮ್ ಬಳಸುವುದರಿಂದ ಎಣ್ಣೆ ಅಂಶ ಹಾಗೂ ಕಾಯಿ ತುಕವನ್ನು ಹೆಚ್ಚಿಸಬಹುದು ಎಂದರು.



