Connect with us

Dvgsuddi Kannada | online news portal | Kannada news online

ದಾವಣಗೆರೆ: ರೈತರಿಂದಲೇ ಬೆಳೆ ಸಮೀಕ್ಷೆ ; ಬೆಳೆ ಸಾಲ ಪಡೆಯಲು ಸಮೀಕ್ಷೆ ಅತ್ಯಗತ್ಯ

ದಾವಣಗೆರೆ

ದಾವಣಗೆರೆ: ರೈತರಿಂದಲೇ ಬೆಳೆ ಸಮೀಕ್ಷೆ ; ಬೆಳೆ ಸಾಲ ಪಡೆಯಲು ಸಮೀಕ್ಷೆ ಅತ್ಯಗತ್ಯ

ದಾವಣಗೆರೆ: ಬೆಳೆ ಸಮೀಕ್ಷೆ ಯೋಜನೆಯು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ರೈತರು ಬೆಳೆದ ಬೆಳೆಗಳಿಗೆ ಸರ್ಕಾರದ ಯೋಜನೆಗಳನ್ನು ಪಡೆಯಲು ಬೆಳೆ ಸಮೀಕ್ಷೆ ಅಡಿಯಲ್ಲಿ ನಿಖರವಾಗಿ ಬೆಳೆಯನ್ನು ನಮೂದಿಸುವುದು ಅತ್ಯಗತ್ಯವಾಗಿದೆ. ಸ್ವತ: ರೈತರು ತಮ್ಮ ಜಮೀನಿನ ಸರ್ವೇ ನಂಬರ್, ಹಿಸ್ಸಾ ನಂಬರ್‍ವಾರು ಬೆಳೆದ ವಿವಿಧ ಬೆಳೆಗಳ ವಿವರ, ಕ್ಷೇತ್ರ, ಖುಷ್ಕಿ, ನೀರಾವರಿ ಮಾಹಿತಿಯನ್ನು ಛಾಯಾಚಿತ್ರ ಸಹಿತ ಬೆಳೆಯ ವಿವರಗಳನ್ನು ಬೆಳೆ ಸಮೀಕ್ಷೆ ಆ್ಯಪ್‍ನಲ್ಲಿ ಅಪ್‍ಲೋಡ್ ಮಾಡಬಹುದಾಗಿದೆ.

“ಬೇಸಿಗೆ ರೈತರ ಬೆಳೆ ಸಮೀಕ್ಷೆ 2021-22” ಆ್ಯಪ್‍ನ್ನು ಗೂಗಲ್ ಪ್ಲೇಸ್ಟೋರ್‍ ನಲ್ಲಿ https://play.google.com/store/apps/details… ಲಿಂಕ್ ಮೂಲಕ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ.

ಬೆಳೆ ಸಮೀಕ್ಷೆಯನ್ನು ಸರ್ಕಾರದ ಯೋಜನೆಗಳಿಗೆ ಬಳಸಲಾಗುತ್ತದೆ : ಎನ್.ಡಿ.ಆರ್.ಎಫ್ ಅಥವಾ ಎಸ್.ಡಿ.ಆರ್.ಎಫ್. ಅಡಿಯಲ್ಲಿ ಪ್ರವಾಹ ಮತ್ತು ಬರಗಾಲ ಸಂದರ್ಭದಲ್ಲಿ ನೀಡುವ ನಷ್ಟ ಪರಿಹಾರ ವಿತರಿಸಲು. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಪಲಾನುಭವಿಗಳವನ್ನು ಗುರುತಿಸಲು. ಬೆಳೆ ವಿಮೆ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲು ಹಾಗೂ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು. ಸಾಂಖ್ಯಿಕ ಇಲಾಖೆ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಬೆಳೆ ವಿಸ್ತೀರ್ಣ ವರದಿ ಕಾರ್ಯದಲ್ಲಿಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕಾಗಿ. ಪಹಣಿಯಲ್ಲಿ ಹಂಗಾಮುವಾರು ಬೆಳೆ ವಿವರ ದಾಖಲಿಸಲು. ಬ್ಯಾಂಕ್ ಮತ್ತು ವ್ಯವಸಾಯ ಸೇವಾ ಸಹಕಾರ ಸಂಘಗಳ ಮುಖಾಂತರ ಬೆಳೆ ಸಾಲ ನೀಡುವ ಸಂದರ್ಭದಲ್ಲಿ ಬೆಳೆ ಪರಿಶೀಲನೆ ಮಾಡಲು ಈ ಯೋಜನೆಗಳಿಗೆ ಬೆಳೆ ಸಮೀಕ್ಷೆ ಮಾಹಿತಿಯು ಅತ್ಯಗತ್ಯವಾಗಿದ್ದು, ರೈತರು ತಪ್ಪದೇ ತಮ್ಮ ಜಮೀನಿನಲ್ಲಿರುವ ಕೃಷಿ, ತೋಟಗಾರಿಕೆ, ಅರಣ್ಯ, ರೇಷ್ಮೆ ಇತರೆ ಬೆಳೆಗಳ ವಿವರಗಳನ್ನು ಬೆಳೆ ಸಮೀಕ್ಷೆ ಆ್ಯಪ್‍ನಲ್ಲಿ ದಾಖಲಿಸಬೇಕಿದೆ.

ಆಯಾ ಗ್ರಾಮದಲ್ಲಿರುವ ವಿದ್ಯಾವಂತ ಯುವಕರನ್ನು ಖಾಸಗಿ ನಿವಾಸಿಗಳೆಂದು ಗುರುತಿಸಲಾಗಿದ್ದು, ಅವರ ಸಹಾಯದಿಂದಲೂ ಬೆಳೆ ಸಮೀಕ್ಷೆ ಆ್ಯಪ್‍ನಲ್ಲಿ ತಾವು ಬೆಳೆದ ಬೆಳೆಯನ್ನು ದಾಖಲಿಸಬಹುದು. ಬೇಸಿಗೆ ಹಂಗಾಮಿನ ಬೆಳೆ ಸಮೀಕ್ಷೆ ವಿವರಗಳನ್ನು ರೈತರೇ ಖುದ್ದು ಅಥವಾ ಖಾಸಗಿ ನಿವಾಸಿಗಳ ಸಹಾಯ ಪಡೆದು ಬೆಳೆ ಸಮೀಕ್ಷೆ ಮಾಡಬಹುದು.ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿಕಾರಿಗಳು, ರೇಷ್ಮೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ. ಎಂದು ದಾವಣಗೆರೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top