ದಾವಣಗೆರೆ: 2020-21ನೇ ಸಾಲಿನ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಿಗೆ ನೀರಿನ ಮಿತ ಬಳಕೆಗಾಗಿ ಹನಿ ನೀರಾವರಿ ಅಳವಡಿಸಲು ಅರ್ಜಿ ಆಹ್ವಾನಿಸಿದೆ.
ಆಸಕ್ತ ಮತ್ತು ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತಬಾಂಧವರಿಗೆ ಶೇ.90 ರಷ್ಟು ಸಹಾಯಧನ ಲಭ್ಯವಿದ್ದು ರೈತರು ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಹೋಬಳಿಯ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿ ಅಥವಾ ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಿದೆ



