Connect with us

Dvgsuddi Kannada | online news portal | Kannada news online

ದಾವಣಗೆರೆ: ಮೆಕ್ಕೆಜೋಳದಲ್ಲಿ ಅಂತರ ಬೆಳೆಯಾಗಿ ತೊಗರಿ ಬೆಳೆದರೆ ರೈತರಿಗೆ ಲಾಭ; ಬೇಸಾಯ ತಜ್ಞ ಮಲ್ಲಿಕಾರ್ಜುನ್

ದಾವಣಗೆರೆ

ದಾವಣಗೆರೆ: ಮೆಕ್ಕೆಜೋಳದಲ್ಲಿ ಅಂತರ ಬೆಳೆಯಾಗಿ ತೊಗರಿ ಬೆಳೆದರೆ ರೈತರಿಗೆ ಲಾಭ; ಬೇಸಾಯ ತಜ್ಞ ಮಲ್ಲಿಕಾರ್ಜುನ್

ದಾವಣಗೆರೆ: ಮೆಕ್ಕೆಜೋಳದಲ್ಲಿ ಅಂತರ ಬೆಳೆಯಾಗಿತೊಗರಿ ಬೆಳೆ ಬೆಳೆದರೆ ರೈತರಿಗೆ ಲಾಭ ಎಂದು ಬೇಸಾಯ ತಜ್ಞ ಮಲ್ಲಿಕಾರ್ಜುನ ಬಿ. ಓ.  ಅಭಿಪ್ರಾಯಪಟ್ಟರು.

ಐಸಿಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರದಿಂದ ಜಗಳೂರು ತಾಲ್ಲೂಕಿನ ಗುತ್ತಿದುರ್ಗ ಗ್ರಾಮದಲ್ಲಿ ಮೆಕ್ಕೆಜೋಳದಲ್ಲಿ ಅಂತರ ಬೆಳೆಯಾಗಿ ತೊಗರಿ ಬೆಳೆಯ ಮುಂಚೂಣಿ ಪ್ರಾತ್ಯಕ್ಷಿಕೆಯ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಬರನಿರೋಧಕ ಹಾಗೂ ಮಧ್ಯಮ ಅವಧಿ ತೊಗರಿ ತಿಳಿಯಾದ TS -3R ಉತ್ತಮ ತಳಿ.ಹ ವಾಮಾನ ವೈಪರ್ಯಕ್ಕೆ ಹಿನ್ನೆಲೆಯಲ್ಲಿ ಮೆಕ್ಕೆಜೋಳವನ್ನು ಏಕ ಬೆಳೆಯಾಗಿ ಬೆಳೆದಾಗ ನಷ್ಟ ವಾಗಬಹುದು, ಆ ಕಾರಣದಿಂದ ಮೆಕ್ಕೆಜೋಳದಲ್ಲಿ ಅಂತರ ಬೆಳೆಯಾಗಿ ದ್ವಿದಳ ಧಾನ್ಯವಾದ ತೊಗರಿಯನ್ನು ಬೆಳೆಯುವುದು ಸೂಕ್ತ ಎಂದರು.

ಪ್ರತಿ ಎಕರೆ ತೊಗರಿ ಬೀಜಕ್ಕೆ ಶಿಫಾರಸ್ಸು ಮಾಡಿದ ಜೈವಿಕ ಗೊಬ್ಬರಗಳಾದ ರೈಸೋಬಿಯಂ ಮತ್ತು ರಂಜಕ ಕರಗಿಸುವ ಗೊಬ್ಬರದಿಂದ ಬೀಜೋಪಚಾರ ಮಾಡಿ ಬಿತ್ತನೆ ಮಾಡುವುದರಿಂದ ಶೇಕಡ 25ರಷ್ಟು ರಾಸಾಯನಿಕ ಗೊಬ್ಬರದಲ್ಲಿ ಕಡಿತಗೊಳಿಸಬಹುದು ಎಂದು ಅಭಿಪ್ರಾಯಪಟ್ಟರು.

ಕೇಂದ್ರದ ಮುಖ್ಯಸ್ಥ ಡಾಕ್ಟರ್ ಟಿ ಎನ್ ದೇವರಾಜ್ ಅವರು ಮಾತನಾಡುತ್ತಾ ಆಧುನಿಕ ತಂತ್ರಜ್ಞಾನಗಳು ಹಾಗೂ ಅಧಿಕ ಇಳುವರಿ ಕೊಡುವ ತಳಿಗಳ ಬಳಕೆಯನ್ನು ರೈತರು ಮಾಡಬೇಕು ಎಂದು ತಿಳಿಸಿದರು. ಮಣ್ಣು ವಿಜ್ಞಾನಿ ಎಚ್ ಎಮ್ ಸಣ್ಣ ಗೌಡರವರು ಮಾತನಾಡಿ, ಮಣ್ಣಿನ ಪರೀಕ್ಷೆಯ ಆಧಾರದ ಮೇಲೆ ರಸಗೊಬ್ಬರವನ್ನು ಬಳಸುವುದರಿಂದ ಮಣ್ಣಿನ ಫಲವತ್ತತೆ ಹಾಗೂ ಉತ್ಪಾದನ ವೆಚ್ಚವನ್ನು ತಗ್ಗಿಸಬಹುದು ಎಂದರು.

ಕಾರ್ಯಕ್ರಮದಲ್ಲಿ ಆಯ್ದ 25 ಮುಂಚಿನ ಪ್ರಾತ್ಯಕ್ಷಿಕೆ ರೈತರಿಗೆ ಒಳ ಸುರಿವುಗಳಾದ ತೊಗರಿ ಬೀಜ ಹಾಗೂ ಜೈವಿಕ ಗೊಬ್ಬರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಸ್ಯ ಸಂರಕ್ಷಣ ತಜ್ಞ ಡಾಕ್ಟರ್ ಅವಿನಾಶ್ ಟಿ ಜಿ, ರೈತ ಉತ್ಪಾದಕ ಕಂಪನಿಯ ನಿರ್ದೇಶಕ ಬಸವನಗೌಡರು, ಪ್ರಗತಿಪರ ರೈತರು ಭಾಗವಹಿಸಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ ಸ್ಥಾಪಿಸಲಾಗಿದೆ. ಸದಾ ಹೊಸತನದೊಂದಿಗೆ ಕನ್ನಡ ಮಾಧ್ಯಮ ಲೋಕ, ಕಾಲ ಕಾಲಕ್ಕೆ ಬದಲಾಗುತ್ತಾ ಬಂದಿದೆ. ರೇಡಿಯೋ, ಪತ್ರಿಕೆ, ಟಿವಿ ಮಾಧ್ಯಮಗಳ ಪ್ರಭಾವ ಮಧ್ಯೆ, ಡಿಜಿಟಲ್ ಮಾಧ್ಯಮವೂ ಕ್ಷಣಾರ್ಧದಲ್ಲಿ ಸುದ್ದಿಯನ್ನು ಇಡೀ ಲೋಕಕ್ಕೆ ತಲುಪಿಸುವ ನವ ಮಾಧ್ಯಮವಾಗಿದೆ. ಡಿವಿಜಿಸುದ್ದಿ‌.ಕಾಂ ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಹತ್ತು ವರ್ಷಕ್ಕೂ ಹೆಚ್ಚು‌ ಕಾಲದ ಮುದ್ರಣ, ವಿದ್ಯುನ್ಮಾನ ಮಾಧ್ಯಮದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top