ಹುಬ್ಬಳ್ಳಿ: ರಾಜ್ಯದ ಬಾದಾಮಿ, ರಾಯಚೂರು, ಕೊಪ್ಪಳ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣ ನಿರ್ಮಿಸಲಾಗುವುದು ಎಂದು ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದರು.
ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ 94ನೇ ಸಂಸ್ಥಾಪನಾ ದಿನ ಹಾಗೂ ‘ವಾಣಿಜ್ಯ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ರಾಜ್ಯದಲ್ಲಿ ಐದು ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗುವುದು. 18 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ರಾಜ್ಯ ಅಭಿವೃದ್ಧಿಯತ್ತ ಸಾಗುತ್ತಿದೆ.
ರಾಜ್ಯದಲ್ಲಿ ಕೈಗಾರಿಕೆ ಸ್ಥಾಪಿಸಲು ಸಾಕಷ್ಟು ಉದ್ಯಮಿಗಳು ಒಲವು ತೋರಿಸುತ್ತಿದ್ದಾರೆ. ರಾಜ್ಯದ ಎಲ್ಲ ಕಡೆಯೂ ಕೈಗಾರಿಕೆಗಳು ಸ್ಥಾಪನೆಯಾಗಬೇಕು. ಅದಕ್ಕೆ ಅನುಕೂಲವಾಗುವಂತೆ ರಾಜ್ಯದ ಬಾದಾಮಿ, ರಾಯಚೂರು, ಕೊಪ್ಪಳ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣ ನಿರ್ಮಿಸಲಾಗುವುದು. ತುಮಕೂರು ಮತ್ತು ಶಿರಾ ನಡುವೆ ಹಾಗೂ ಬೆಳಗಾವಿಯ ಕಿತ್ತೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ ಎಂದರು.