Connect with us

Dvgsuddi Kannada | online news portal | Kannada news online

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

images 30

ಪ್ರಮುಖ ಸುದ್ದಿ

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ(ಹೊಸದು) (ನವೀಕರಣ), ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ, ನೇರ ಸಾಲ ಮತ್ತು ಸಹಾಯಧನ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆಗೆ ಹಿಂದುಳಿದ ವರ್ಗಗಳ ಪ್ರವರ್ಗ-1 ರ ಅರ್ಜಿದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಲ ಸೌಲಭ್ಯ ಪಡೆಯಲು ನಿಗದಿತ ಅರ್ಜಿ ನಮೂನೆಗಳಲ್ಲಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ನವಂಬರ್ 2 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿ ಅಥವಾ ನಿಗಮದ ವೆಬ್‍ಸೈಟ್ https://ambigaradevelopment.karnataka.gov.in ನ್ನು ಸಂಪರ್ಕಿಸಬಹುದು. ಅರ್ಜಿ ನಮೂನೆಯನ್ನು ನಿಗಮದ ವೆಬ್‍ಸೈಟ್‍ನಲ್ಲಿ ಹಾಗೂ ಉಚಿತವಾಗಿ ಜಿಲ್ಲಾ ಕಚೇರಿಯಲ್ಲಿ ಪಡೆಯಬಹುದು. ಜಿಲ್ಲಾ ನಿಗಮದ ಕಚೇರಿ ದೂರವಾಣಿ ಸಂಖ್ಯೆ 08192-230934 ಕ್ಕೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಸಾತ್ವಿಕ್ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top