ದಾವಣಗೆರೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ವಿವಿಧ ತಾಲ್ಲೂಕುಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ದಾವಣಗೆರೆ, ಜಗಳೂರು, ಹರಿಹರ, ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 19 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 101 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಡಿ.18 ರಿಂದ http://davanagere.nic.in ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, 2022 ರ ಜನವರಿ 18 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗಾಗಿ ದಾವಣಗೆರೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ದೂ.ಸಂ: 08192-263219., ಹರಿಹರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ:08192-241431., ಜಗಳೂರು ದೂ.ಸಂ:08196-227132, ಹೊನ್ನಾಳಿ ದೂ.ಸಂ:08188-251283, ಚನ್ನಗಿರಿ ದೂ.ಸಂ:08189-228010 ಗೆ ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



