ದಾವಣಗೆರೆ; ಜಿಲ್ಲೆಯಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿಗೆ ಡಾ|| ಎ.ಪಿ.ಜೆ.ಅಬ್ದುಲ್ ಕಲಾಂ ಪದವಿ ಪೂರ್ವ ವಸತಿ ಕಾಲೇಜು, ಕೊಂಡಜ್ಜಿ ಗ್ರಾಮದಲ್ಲಿನ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಕಾಲೇಜು, ದಾವಣಗೆರೆ, ಮೊರಾರ್ಜಿದೇಸಾಯಿ ವಸತಿ ಕಾಲೇಜು, ಕೆರೆಬಿಳಚಿ, ಇಲ್ಲಿ ಪ್ರಥಮ ಪಿ.ಯು.ಸಿ.ಯಲ್ಲಿ ವಿಜ್ಞಾನ ವಿಭಾಗದ ಪಿ.ಸಿ.ಎಂ.ಬಿ, ಪಿ.ಸಿ.ಎಂ.ಸಿ ವಿಷಯಗಳಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲಾಗುತ್ತದೆ. .ಈ ಕಾಲೇಜಿನಲ್ಲಿ ಅಲ್ಪಸಂಖ್ಯಾತರ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75 ರಷ್ಟು ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ.25 ರಷ್ಟು ಪ್ರವೇಶಕ್ಕೆ ಅವಕಾಶವಿದೆ.
ಅರ್ಹ ಅಭ್ಯರ್ಥಿಗಳು ಮೇ.27 ರೊಳಗಾಗಿ ಅರ್ಜಿಗಳನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಡಾ|| ಎ.ಪಿ.ಜೆಅಬ್ದುಲ್ ಕಲಾಂ ಪದವಿ ಪೂರ್ವ ವಸತಿ ಕಾಲೇಜು, ಕೊಂಡಜ್ಜಿ ಗ್ರಾಮ ಮೊ:9008815296, ಮೊರಾರ್ಜಿದೇಸಾಯಿ ಬಾಲಕಿಯರ ವಸತಿ ಕಾಲೇಜು, ದಾವಣಗೆರೆ ಟೌನ್ ಮೊ: 991682860, ಮೊರಾರ್ಜಿದೇಸಾಯಿ ವಸತಿ ಕಾಲೇಜು, ಕೆರೆಬಿಳಚಿ, ಮೊ:9483075634 ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.



