ದಾವಣಗೆರೆ: ಕೊರೊನಾ 19 ಸಾಂಕ್ರಾಮಿಕ ರೋಗ ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮಾರ್ಗಸೂಚಿ ಅನ್ವಯವಾಗಿ ಏ.22 ರಂದು ಕಫ್ರ್ಯೂ ಜಾರಿಯಲ್ಲಿದೆ. ಕೃಷಿ ಮಾರಾಟ ಇಲಾಖೆಯ ನಿರ್ದೇಶಕರ ಆದೇಶದಂತೆ ಏ.24 ರ ಶನಿವಾರ ಮತ್ತು ಏ.25 ರ ಭಾನುವಾರದಂದು ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿ ಮಾರುಕಟ್ಟೆಗೆ ರಜಾ ದಿನವೆಂದು ಘೋಷಿಸಲಾಗಿದೆ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



