ದಾವಣಗೆರೆ: ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ (ಆಂಗ್ಲ ಮಾದ್ಯಮ) ಶಾಲೆಗಳ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ (ಸಿ.ಬಿ.ಎಸ್.ಇ) ಶಾಲೆಗಳ ದಾಖಲಾತಿಗಾಗಿ 2026-27ನೇ ಶೈಕ್ಷಣಿಕ ವರ್ಷಕ್ಕೆ 6ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಆನ್‌ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
5ನೇ ತರಗತಿ ಪಾಸಾದ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75 ಹಾಗೂ ಪರಿಶಿಷ್ಠ ಜಾತಿ, ಪರಿಶಿಷ್ಠ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ (ಒಬಿಸಿ) ಶೇ.25 ರಷ್ಟು ಸೀಟು ಲಭ್ಯವಿದೆ.
ಈ ಜಿಲ್ಲೆಗಳಲ್ಲಿ ಗ್ರಾಮ ಒನ್ ಕೇಂದ್ರ ಆರಂಭಿಸಲು ಆಸಕ್ತರಿಂದ ಅರ್ಜಿ ಆಹ್ವಾನ
ವಸತಿ ಶಾಲೆಗಳಲ್ಲಿ ಉಚಿತ ಊಟ, ವಸತಿ, ಪಠ್ಯಪುಸ್ತಕ, ಲೇಖನ ಸಾಮಗ್ರಿ, ಸಮವಸ್ತ್ರಗಳೊಂದಿಗೆ ಇತರ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುವುದು. ಪ್ರವೇಶ ಬಯಸುವ ಅಲ್ಪಸಂಖ್ಯಾತರ ಮತ್ತು ಇತರೆ ಪ್ರವರ್ಗಗಳ ಆಸಕ್ತ ವಿದ್ಯಾರ್ಥಿಗಳು ಸಂಬಂಧಿಸಿದ ಸೇವಾ ಸಿಂಧು ಪೋರ್ಟಲ್ ವೈಬ್‍ಸೈಟ್ https://sevasindhuservices.karnataka.gov.in ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 10 ಕೊನೆಯ ದಿನವಾಗಿದೆ.
ದಾವಣಗೆರೆ: ಅಡಿಕೆ ಬಂಗಾರದ ಬೆಲೆ- ಬೆಳೆಗಾರರು, ಖೇಣಿದಾರರಿಗೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ಕಿರಿಕ್
ಈ ಉಚಿತ ಸೇವೆ ಪಡೆಯಲು ಸಮೀಪದ ಜಿಲ್ಲಾ ಅಲ್ಪ ಸಂಖ್ಯಾತರ ಕಚೇರಿ ಅಥವಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಅಥವಾ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



