Connect with us

Dvgsuddi Kannada | online news portal | Kannada news online

ದಾವಣಗೆರೆ: 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ; ಪ್ರತಿ ತಿಂಗಳು 15 ಸಾವಿರ ಸ್ಟೈಫೆಂಡ್

ದಾವಣಗೆರೆ

ದಾವಣಗೆರೆ: 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ; ಪ್ರತಿ ತಿಂಗಳು 15 ಸಾವಿರ ಸ್ಟೈಫೆಂಡ್

ದಾವಣಗೆರೆ: ದಾವಣಗೆರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಡಿಸೆಂಬರ್ 5 ಕೊನೆಯ ದಿನವಾಗಿದೆ.

  • ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ತರಬೇತಿ
  • 12 ತಿಂಗಳ ಅಪ್ರೆಂಟಿಸ್ ತರಬೇತಿ
  • ಪತ್ರಿಕೋದ್ಯಮ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಅವಕಾಶ
  • ಪ್ರತಿ ತಿಗಳು 15,000 ರೂಗಳ ಸ್ಟೈಫೆಂಡ್

ವಿಶೇಷ ಘಟಕ ಯೋಜನೆಯಡಿ 12 ತಿಂಗಳ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ, ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಎಂದು ನಮೂದಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸುವುದು.

ಆಯ್ಕೆಯಾಗಿ ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಅಭ್ಯರ್ಥಿಗಳು ಪದವಿಯ ಎಲ್ಲ ವರ್ಷಗಳ ಅಂಕಪಟ್ಟಿಗಳು, ಸ್ನಾತ್ತಕೋತ್ತರ ಪದವಿಯ ಎಲ್ಲ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಅಂಕಪಟ್ಟಿಯನ್ನು ನಿರೀಕ್ಷಿಸಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ತರಬೇತಿಯ ಅವಧಿ ವೇಳೆ ಮಾಹೆಯಾನ 15,000 ರೂಗಳ ಸ್ಟೈಫೆಂಡ್ ನೀಡಲಾಗುವುದು. ತರಬೇತಿಯು 2025ರ ಜನವರಿಯಿಂದ ಡಿಸೆಂಬರ್ ವರೆಗೆ 12 ತಿಂಗಳ ಅವಧಿಯದಾಗಿದ್ದು, ತಾತ್ಕಾಲಿಕವಾಗಿರುತ್ತದೆ. ತರಬೇತಿ ಮುಗಿದ ನಂತರ ಮುಂದುವರೆಸಲು ಅಥವಾ ಖಾಯಂಗೊಳಿಸಲು ಯಾವುದೇ ಅವಕಾಶ ಇರುವುದಿಲ್ಲ.

ತರಬೇತಿಯ ಅವಧಿಯಲ್ಲಿ ತರಬೇತಾರ್ಥಿಗಳು ಬೇರೆ ಉದ್ಯೋಗ ಮಾಡುವಂತಿಲ್ಲ. ತರಬೇತಿಯ ಅವಧಿಯ ಮಧ್ಯದಲ್ಲಿ ಬಿಟ್ಟು ಹೋದರೆ, ಮೂಲ ದಾಖಲಾತಿಗಳನ್ನು ಅವಧಿಗೆ ಮುನ್ನ ಹಿಂದುರುಗಿಸುವುದಿಲ್ಲ. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ ಹಾಗೂ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.
ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ ಇಲ್ಲಿ, ಮೊ.9480841218 ಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ನಿರ್ದೇಶಕ ಧನಂಜಯ ಬಿ. ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top