ದಾವಣಗೆರೆ: ಅಡಿಕೆಗೆ ಬಂಗಾರದ ಬೆಲೆ ಬಂದಿದ್ದು, ಕ್ವಿಂಟಲ್ ಅಡಿಕೆ ದರ 60 ಸಾವಿರ ಸಮೀಪ ಇದೆ. ಈ ಕಾರಣಕ್ಕೆ ಅಡಿಕೆ ಬೆಳೆಗಾರರು, ಖೇಣಿದಾರರು ಮಾರಾಟ ಮಾಡಿದ ಅಥವಾ ರೈತರಿಗೆ ಹಣ ನೀಡಲು ಲಕ್ಷಾಂತರ ರೂ. ಇಟ್ಟುಕೊಂಡು ಓಡಾಡುವುದು ಸಾಮಾನ್ಯ. ಇದೇ ವಿಷಯಕ್ಕೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಕಿರಿಕ್ ನೀಡಲು ಶುರು ಮಾಡಿದ್ದಾರೆ. ರಸ್ತೆ ಮಧ್ಯೆ ತಡೆದು ಹಣ ಮೂಲ ಕೇಳಿ ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ.
ದಾವಣಗೆರೆ: ಅಡಿಕೆ ಬೆಲೆಯಲ್ಲಿ ಮತ್ತೆ ಚೇತರಿಕೆ; ಇಂದಿನ ಬೆಲೆ ಎಷ್ಟು.?
ಐಟಿ ಅಧಿಕಾರಿಗಳ ವಿರುದ್ಧ ಶಾಸಕ ಕಿಡಿ
ಚನ್ನಗಿರಿ ಭಾಗದ ಅಡಿಕೆ ಬೆಳೆಗಾರರು ಹಾಗೂ ಖೇಣಿದಾರರಿಗೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಅನಗತ್ಯ ಕಿರುಕುಳ ನೀಡುತ್ತಿದ್ದು, ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಆರೋಪಿಸಿದ್ದಾರೆ. ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಸೂಚನೆ ನೀಡಿದ್ದಾರೆ.
ಈ ಜಿಲ್ಲೆಗಳಲ್ಲಿ ಗ್ರಾಮ ಒನ್ ಕೇಂದ್ರ ಆರಂಭಿಸಲು ಆಸಕ್ತರಿಂದ ಅರ್ಜಿ ಆಹ್ವಾನ
ರಸ್ತೆ ಅಡ್ಡಗಟ್ಟಿ ಪರಿಶೀಲನೆ ಹೆಸರಿನಲ್ಲಿ ಲಂಚಕ್ಕೆ ಬೇಡಿಕೆ
ಲಂಚದ ಬೇಡಿಕೆ ಮತ್ತು ದಾಖಲೆಗಳ ಕಿರಿಕಿರಿ ಅಡಿಕೆ ಮಾರಾಟಕ್ಕೆ ಹೋಗುವ ರೈತರನ್ನು ಅಡ್ಡಗಟ್ಟಿ ಅಧಿಕಾರಿಗಳು ಹಣ ಕೇಳುತ್ತಿದ್ದಾರೆ. ಖೇಣಿ ಮಾಡುವ ರೈತರಿಂದ ಇಲ್ಲಸಲ್ಲದ ದಾಖಲೆ ಕೇಳಿ ಪರಿಶೀಲನೆ ಹೆಸರಿನಲ್ಲಿ ಹಿಂಸೆ ನೀಡಲಾಗುತ್ತಿದೆ. ಕೆಲ ಅಧಿಕಾರಿಗಳು ರೈತರಿಗೆ ಹಣದ ಬೇಡಿಕೆ ಇಟ್ಟಿರುವ ಮಾಹಿತಿ ಲಭ್ಯವಾಗಿದೆ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆಯನ್ನು ಇಳಾಖೆ ಮೇಲಾಧಿಕಾರಿಗಳು ತಿಳಿಸಿದ್ದಾರೆ.
ಗ್ರಾಮ ಆಡಳಿತ ಅಧಿಕಾರಿ ನೇರ ನೇಮಕಾತಿಗೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್



