Connect with us

Dvgsuddi Kannada | online news portal | Kannada news online

ದಾವಣಗೆರೆ: ಅಡಿಕೆ ಧಾರಣೆಯಲ್ಲಿ ಮತ್ತಷ್ಟು ಕುಸಿತ; ವಾರದಲ್ಲಿ 1000 ರೂ.ಇಳಿಕೆ

ಪ್ರಮುಖ ಸುದ್ದಿ

ದಾವಣಗೆರೆ: ಅಡಿಕೆ ಧಾರಣೆಯಲ್ಲಿ ಮತ್ತಷ್ಟು ಕುಸಿತ; ವಾರದಲ್ಲಿ 1000 ರೂ.ಇಳಿಕೆ

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಧಾರಣೆಯಲ್ಲಿ ಮತ್ತೆ ಇಳಿಕೆ ಕಂಡಿದೆ. ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ರೈತರಿಗೆ ಮತ್ತಷ್ಟು ಸಂಕಷ್ಟ ಉಂಟು ಮಾಡಿದೆ. ದಿನದ ವಹಿವಾಟಿನ ಏರಿಳಿತ ನಡುವೆಯೇ ಜಿಲ್ಲೆಯಲ್ಲಿ ಇಂದು (ಫೆ.08) ಪ್ರತಿ ಕ್ವಿಂಟಾಲ್ ಗೆ ಗರಿಷ್ಠ 45,555 ರೂ.ಗೆ ಮಾರಾಟವಾಗಿದೆ. ಈ ಮೂಲಕ ಹಿಂದಿನ ಒಂದು ವಾರದ ಮಾರುಕಟ್ಟೆಗೆ ಹೊಲಿಸಿದ್ರೆ ಬೆಲೆಯಲ್ಲಿ 1000 ರೂ.ಗಳಷ್ಟು ಇಳಿಕೆ ಆಗಿದೆ.

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿಯಲ್ಲಿ ಉತ್ತಮ ರಾಶಿ ಅಡಿಕೆ ಪ್ರತಿ ಕ್ವಿಂಟಾಲ್ ಗೆ ದರ 45,555 ಗರಿಷ್ಠ ಬೆಲೆ ದಾಖಲಾಗಿದೆ. ನಿನ್ನೆ ಕ್ವಿಂಟಾಲ್ ಗೆ ಗರಿಷ್ಠ 45,679 ರೂ. ದಾಖಲಾಗಿತ್ತು. 2nd ಬೆಟ್ಟೆ ಅಡಿಕೆ ಗರಿಷ್ಠ 36,131 ಬೆಲೆಗೆ ಮಾರಾಟವಾಗಿದೆ.

ಫೆ.08 ರಂದು ಉತ್ತಮ ರಾಶಿಯ ಕನಿಷ್ಠ ಬೆಲೆ‌ 41,999 ಆಗಿದ್ದು, ಗರಿಷ್ಠ ಬೆಲೆ 45,555 ಹಾಗೂ ಸರಾಸರಿ ಬೆಲೆ 44,558 ಆಗಿದೆ. ಇನ್ನೂ 2nd ಬೆಟ್ಟೆ ಅಡಿಕೆ ಬೆಲೆ ಕನಿಷ್ಠ ಬೆಲೆ 28,631ಗರಿಷ್ಠ ಬೆಲೆ 36,131 ಹಾಗೂ ಸರಾಸರಿ ಬೆಲೆ 33,484 ಆಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top