Connect with us

Dvgsuddi Kannada | online news portal | Kannada news online

ದಾವಣಗೆರೆ: ಅಡಿಕೆ ಬೆಲೆಯಲ್ಲಿ ಮತ್ತೆ ಏರಿಕೆ; 46 ಸಾವಿರ ಗಡಿ ದಾಟಿದ ಬೆಲೆ

arecanut

ದಾವಣಗೆರೆ

ದಾವಣಗೆರೆ: ಅಡಿಕೆ ಬೆಲೆಯಲ್ಲಿ ಮತ್ತೆ ಏರಿಕೆ; 46 ಸಾವಿರ ಗಡಿ ದಾಟಿದ ಬೆಲೆ

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಧಾರಣೆ ಮತ್ತೆ ಏರಿಕೆಯಾಗಿದೆ. ಏಪ್ರಿಲ್ ಆರಂಭದಲ್ಲಿ ಕುಸಿತದಲ್ಲಿದ್ದ ಬೆಲೆ ಈಗ ಏರಿಕೆಯತ್ತ‌ ಮುಖ ಮಾಡಿದೆ. ಇದರಿಂದ ಅಡಿಕೆ ಬೆಳೆದ ರೈತರಲ್ಲಿ ಸಂತಸ ಉಂಟು ಮಾಡಿದೆ.

ದಿನದ ವಹಿವಾಟಿನ ಏರಿಳಿತ ನಡುವೆಯೇ ಜಿಲ್ಲೆಯಲ್ಲಿ ಇಂದು (ಏ.10) ಪ್ರತಿ ಕ್ವಿಂಟಾಲ್ ಗೆ ಗರಿಷ್ಠ 46,099ರೂ.ಗೆ ಮಾರಾಟವಾಗಿದೆ. ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿಯಲ್ಲಿ ಉತ್ತಮ ರಾಶಿ ಅಡಿಕೆ ಪ್ರತಿ ಕ್ವಿಂಟಾಲ್ ಗೆ ದರ 46,099 ಗರಿಷ್ಠ ಬೆಲೆ ದಾಖಲಾಗಿದೆ. ನಿನ್ನೆ ಕ್ವಿಂಟಾಲ್ ಗೆ ಗರಿಷ್ಠ 45,600 ರೂ. ದಾಖಲಾಗಿತ್ತು.

ಏ.10ರಂದು ಉತ್ತಮ ರಾಶಿಯ ಕನಿಷ್ಠ ಬೆಲೆ‌ 44,399 ಆಗಿದ್ದು, ಗರಿಷ್ಠ ಬೆಲೆ 46,099 ಹಾಗೂ ಸರಾಸರಿ ಬೆಲೆ 45,351 ಆಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top