Connect with us

Dvgsuddi Kannada | online news portal | Kannada news online

ದಾವಣಗೆರೆ ಅಡಿಕೆ ಧಾರಣೆಯಲ್ಲಿ ಮತ್ತೆ ಏರಿಕೆ: ಮೇ 8ರ ರಾಶಿ ಅಡಿಕೆ ಕನಿಷ್ಠ, ಗರಿಷ್ಠ ಬೆಲೆ ಎಷ್ಟಿದೆ..?

ಪ್ರಮುಖ ಸುದ್ದಿ

ದಾವಣಗೆರೆ ಅಡಿಕೆ ಧಾರಣೆಯಲ್ಲಿ ಮತ್ತೆ ಏರಿಕೆ: ಮೇ 8ರ ರಾಶಿ ಅಡಿಕೆ ಕನಿಷ್ಠ, ಗರಿಷ್ಠ ಬೆಲೆ ಎಷ್ಟಿದೆ..?

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರ (arecanut rate) ಎರಡ್ಮೂರು ದಿನದಿಂದ ಸತತ ಚೇತರಿಕೆ ಕಾಣುತ್ತಿದೆ. ಮೇ ಆರಂಭದಲ್ಲಿ 1, ಕುಸಿತ ಕಂಡಿದ್ದ ಬೆಲೆ ಇದೀಗ 1,200 ರೂ. ಹೆಚ್ಚಳವಾಗಿದೆ. ಕಂಡಿದೆ. ಇಂದು (ಮೇ 8) ಒಂದೇ ದಿನ 500 ರೂ. ಏರಿಕೆಯಾಗಿದೆ‌. ದಾವಣಗೆರೆ ರಾಶಿ ಅಡಿಕೆ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 53,321 ರೂ.ಗಳಿದ್ದು, ಕನಿಷ್ಠ ಬೆಲೆ 51,512 ರೂ.ಗಳಾಗಿದೆ.

ಕಳೆದ ವರ್ಷ (2023) ಜುಲೈ ತಿಂಗಳಲ್ಲಿ ಗರಿಷ್ಠ ಬೆಲೆ 57 ಸಾವಿರ ತಲುಪಿತ್ತು. ಹೀಗಾಗಿ ಇನ್ನೂ ಸ್ವಲ್ಪ‌ ದಿನ ಇಟ್ಟು ಮಾರಾಟ ಮಾಡುವವರಿಗೆ‌ ಮುಂದೆ ಒಳ್ಳೆಯ ರೇಟ್ ಸಿಗುವ ಸಾಧ್ಯತೆ ಇದೆ. ಮೇ ತಿಂಗಳಲ್ಲಿ ಬೇಸಿಗೆ ಬಿಸಿ ಹೆಚ್ಚಳವಾಗಿದ್ದು, ಬೋರ್ ವೆಲ್ ಗಳಲ್ಲಿ ಅಂತರ್ಜಲ ಮಟ್ಟ ತೀವ್ರ ಕುಸಿತವಾಗಿದೆ. ವಾತಾವರಣದಲ್ಲಿ ಬಿಸಿಗಾಳಿ ಹೆಚ್ಚಿದ್ದು, ಅಡಿಕೆ ಬೆಳೆ ಒಣಗುತ್ತಿವೆ. ಹೇಗಾದ್ರೂ ಮಾಡಿ ಮೇ ತಿಂಗಳಲ್ಲಿ ಅಡಿಕೆ ತೋಟ ಬದುಕಿಸಿಕೊಂಡರೆ ಸಾಕು ಎಂದು ರೈತರು ಹರಸಾಹಸ ಪಡುತ್ತಿದ್ದಾರೆ. ರೈತರು ಅಡಿಕೆ ಬದುಕಿಸಿಕೊಳ್ಳಲು ಟ್ಯಾಂಕರ್ ನೀರಿನ ಮೊರೆ ಹೋಗಿದ್ದಾರೆ.

2024 ಜನವರಿ 15ರಂದು ಗರಿಷ್ಠ ದರ 50,500 ರೂಪಾಯಿ ಗಡಿ ತಲುಪಿತ್ತು. ಫೆಬ್ರವರಿ ತಿಂಗಳಲ್ಲಿ‌ ಏಕಾಏಕಿ 48 ಸಾವಿರಕ್ಕೆ ಕುಸಿದಿತ್ತು. ಮಾರ್ಚ್ ತಿಂಗಳಳಲ್ಲಿ ಸ್ವಲ್ಪ ಚೇತರಿಕೆ ಕಂಡು 50 ಸಾವಿರ ತಲುಪಿತ್ತು. ಈಗ ಏಪ್ರಿಲ್ ನಲ್ಲಿ ಗರಿಷ್ಠ 54 ಸಾವಿರ ಗಡಿ ತಲುಪಿ, ಕುಸಿದು ಪುನಃ 54 ಸಾವಿರ ಸಮೀಪ ಬಂದಿದೆ.

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ ವಹಿವಾಟಿನಲ್ಲಿ ಮೇ 08ರಂದು ಪ್ರತಿ ಕ್ವಿಂಟಲ್ ಉತ್ತಮ ರಾಶಿ ಅಡಿಕೆ ಕನಿಷ್ಠ ಬೆಲೆ 51,512ರೂ., ಗರಿಷ್ಠ ಬೆಲೆ 53,321 ಹಾಗೂ ಸರಾಸರಿ ಬೆಲೆ 52,686 ರೂ.ಗೆ ಮಾರಾಟವಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top