Connect with us

Dvgsuddi Kannada | online news portal | Kannada news online

ದಾವಣಗೆರೆ: ಅಡಿಕೆ ಧಾರಣೆಯಲ್ಲಿ ಭರ್ಜರಿ ಏರಿಕೆ: 55 ಸಾವಿರ ಗಡಿ ದಾಟಿದ ಅಡಿಕೆ ದರ…!!!

ಪ್ರಮುಖ ಸುದ್ದಿ

ದಾವಣಗೆರೆ: ಅಡಿಕೆ ಧಾರಣೆಯಲ್ಲಿ ಭರ್ಜರಿ ಏರಿಕೆ: 55 ಸಾವಿರ ಗಡಿ ದಾಟಿದ ಅಡಿಕೆ ದರ…!!!

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರದಲ್ಲಿ (arecanut rate) ಭರ್ಜರಿ ಏರಿಕೆ ಕಂಡಿದೆ. ಇಂದು (ಮೇ 13) ರಾಶಿ ಅಡಿಕೆ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 55,099 ರೂ.ಗಳಿದ್ದು, ಈ ವರ್ಷದಲ್ಲಿಯೇ ಗರಿಷ್ಠ ಬೆಲೆಯಾಗಿದೆ. ಇಂದು ಕನಿಷ್ಠ ಬೆಲೆ 53,212 ರೂ.ಗಳಾಗಿದೆ. ಹಿಂದಿನ ದಿನದ ಮಾರುಕಟ್ಟೆಯಲ್ಲಿ 53,321 ರೂ.ಗಳಿತ್ತು. ಇಂದು ಒಮ್ಮೆಲೇ 2 ಸಾವಿರ ರೂ. ಹೆಚ್ಚಳವಾಗಿದೆ.

ಕಳೆದ ವರ್ಷ (2023) ಜುಲೈ ತಿಂಗಳಲ್ಲಿ ಗರಿಷ್ಠ ಬೆಲೆ 57 ಸಾವಿರ ತಲುಪಿತ್ತು. ಹೀಗಾಗಿ ಇನ್ನೂ ಸ್ವಲ್ಪ‌ ದಿನ ಇಟ್ಟು ಮಾರಾಟ ಮಾಡುವವರಿಗೆ‌ ಮುಂದೆ ಒಳ್ಳೆಯ ರೇಟ್ ಸಿಗುವ ಸಾಧ್ಯತೆ ಇದೆ. ಮೇ ತಿಂಗಳಲ್ಲಿ ಬೇಸಿಗೆ ಬಿಸಿ ಹೆಚ್ಚಳವಾಗಿದ್ದು, ಬೋರ್ ವೆಲ್ ಗಳಲ್ಲಿ ಅಂತರ್ಜಲ ಮಟ್ಟ ತೀವ್ರ ಕುಸಿತವಾಗಿದೆ. ವಾತಾವರಣದಲ್ಲಿ ಬಿಸಿಗಾಳಿ ಹೆಚ್ಚಿದ್ದು, ಜಿಲ್ಲೆಯ ಕೆಲವು ಕಡೆ ಮಳೆಯಾಗುತ್ತಿದೆ.

ತೀವ್ರ ಬಿಸಿ ಗಾಳಿಯಿಂದ ಅಡಿಕೆ ಬೆಳೆ ಒಣಗುತ್ತಿದ್ದಿ, ಹೇಗಾದ್ರೂ ಮಾಡಿ ಮೇ ತಿಂಗಳಲ್ಲಿ ಅಡಿಕೆ ತೋಟ ಬದುಕಿಸಿಕೊಂಡರೆ ಸಾಕು ಎಂದು ರೈತರು ಹರಸಾಹಸ ಪಡುತ್ತಿದ್ದಾರೆ. ಶೇ. 50ರಷ್ಟು ರೈತರು ಅಡಿಕೆ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ನೀರಿನ ಮೊರೆ ಹೋಗಿದ್ದಾರೆ.

2024 ಜನವರಿ 15ರಂದು ಗರಿಷ್ಠ ದರ 50,500 ರೂಪಾಯಿ ಗಡಿ ತಲುಪಿತ್ತು. ಫೆಬ್ರವರಿ ತಿಂಗಳಲ್ಲಿ‌ ಏಕಾಏಕಿ 48 ಸಾವಿರಕ್ಕೆ ಕುಸಿದಿತ್ತು. ಮಾರ್ಚ್ ತಿಂಗಳಳಲ್ಲಿ ಸ್ವಲ್ಪ ಚೇತರಿಕೆ ಕಂಡು 50 ಸಾವಿರ ತಲುಪಿತ್ತು. ಈಗ ಏಪ್ರಿಲ್ ನಲ್ಲಿ ಗರಿಷ್ಠ 54 ಸಾವಿರ ಗಡಿ ತಲುಪಿತ್ತು. ಪುನಃ ಕುಸಿದು ಮೇ ತಿಂಗಳಲ್ಲಿ ಈಗ 55 ಸಾವಿರ ತಲುಪಿದೆ. ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ ವಹಿವಾಟಿನಲ್ಲಿ ಮೇ 13ರಂದು ಪ್ರತಿ ಕ್ವಿಂಟಲ್ ಉತ್ತಮ ರಾಶಿ ಅಡಿಕೆ ಕನಿಷ್ಠ ಬೆಲೆ 53,212 ರೂ., ಗರಿಷ್ಠ ಬೆಲೆ 55,099 ಹಾಗೂ ಸರಾಸರಿ ಬೆಲೆ 53,747 ರೂ.ಗೆ ಮಾರಾಟವಾಗಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top