Connect with us

Dvgsuddi Kannada | online news portal | Kannada news online

ಅಡಿಕೆ ದರ: ಏರಿದ ವೇಗದಲ್ಲಿಯೇ ಸತತ ಕುಸಿತ; ದಾವಣಗೆರೆಯ ಮೇ 17ರ ರಾಶಿ ಅಡಿಕೆ ಧಾರಣೆ ಎಷ್ಟಿದೆ..?

ದಾವಣಗೆರೆ

ಅಡಿಕೆ ದರ: ಏರಿದ ವೇಗದಲ್ಲಿಯೇ ಸತತ ಕುಸಿತ; ದಾವಣಗೆರೆಯ ಮೇ 17ರ ರಾಶಿ ಅಡಿಕೆ ಧಾರಣೆ ಎಷ್ಟಿದೆ..?

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರ (arecanut rate) ಮೇ ತಿಂಗಳಲ್ಲಿ ಏರಿದ ದರದಲ್ಲಿಯೇ ಎರಡು ದಿನದಿಂದ ಕುಸಿತ ಕಾಣುತ್ತಿದೆ. ಎರಡೇ ದಿನಕ್ಕೆ 600 ರೂ. ಇಳಿಕೆಯಾಗಿದೆ. ಮೇ 13ರಂದು 55 ಸಾವಿರ ಗಡಿ ದಾಟಿತ್ತು. ಇದು ಈ ವರ್ಷದಲ್ಲಿಯೇ ಗರಿಷ್ಠ ಬೆಲೆಯಾಗಿತ್ತು. ಇಂದು (ಮೇ 17) ರಾಶಿ ಅಡಿಕೆ ಧಾರಣೆಯಲ್ಲಿ ದಿಢೀರ್ ಕುಸಿತ ಕಂಡಿದ್ದು, ಮತ್ತೆ 300 ರೂ. ಇಳೆಕೆಯಾಗಿದೆ. ಇಂದು ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 54,499 ರೂ.ಗಳಿದ್ದು, ಕನಿಷ್ಠ ಬೆಲೆ 49,199ರೂ.ಗಳಾಗಿದೆ.

ಕಳೆದ ವರ್ಷ (2023) ಜುಲೈ ತಿಂಗಳಲ್ಲಿ ಗರಿಷ್ಠ ಬೆಲೆ 57 ಸಾವಿರ ತಲುಪಿತ್ತು. ಹೀಗಾಗಿ ಇನ್ನೂ ಸ್ವಲ್ಪ‌ ದಿನ ಇಟ್ಟು ಮಾರಾಟ ಮಾಡುವವರಿಗೆ‌ ಮುಂದೆ ಒಳ್ಳೆಯ ರೇಟ್ ಸಿಗುವ ಸಾಧ್ಯತೆ ಇದೆ. ಮೇ ತಿಂಗಳಲ್ಲಿ ಬೇಸಿಗೆ ಬಿಸಿ ಹೆಚ್ಚಳವಾಗಿದ್ದು, ಬೋರ್ ವೆಲ್ ಗಳಲ್ಲಿ ಅಂತರ್ಜಲ ಮಟ್ಟ ತೀವ್ರ ಕುಸಿತವಾಗಿದೆ. ತೀವ್ರ ಬಿಸಿ ಗಾಳಿಯಿಂದ ಅಡಿಕೆ ಬೆಳೆ ಒಣಗುತ್ತಿದ್ದು, ಹೇಗಾದ್ರೂ ಮಾಡಿ ಮೇ ತಿಂಗಳಲ್ಲಿ ಅಡಿಕೆ ತೋಟ ಬದುಕಿಸಿಕೊಂಡರೆ ಸಾಕು ಎಂದು ರೈತರು ಹರಸಾಹಸಪಡುತ್ತಿದ್ದಾರೆ. ಈಗಾಗಲೇ ಶೇ. 50ರಷ್ಟು ರೈತರು ಅಡಿಕೆ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ನೀರಿನ ಮೊರೆ ಹೋಗಿದ್ದಾರೆ. ಜಿಲ್ಲೆಯ ಕೆಲ ಭಾಗದಲ್ಲಿ ಸ್ವಲ್ಪ‌ ಮಳೆಯಾಗುತ್ತಿದ್ದು, ಬಿಸಿ ಗಾಳಿಯ ಅಲೆ ತಗ್ಗಿದೆ.

2024 ಜನವರಿ 15ರಂದು ರಾಶಿ ಅಡಿಕೆ ಗರಿಷ್ಠ ದರ 50,500 ರೂಪಾಯಿ ಗಡಿ ತಲುಪಿತ್ತು. ಫೆಬ್ರವರಿ ತಿಂಗಳಲ್ಲಿ‌ ಏಕಾಏಕಿ 48 ಸಾವಿರಕ್ಕೆ ಕುಸಿದಿತ್ತು. ಮಾರ್ಚ್ ತಿಂಗಳಳಲ್ಲಿ ಸ್ವಲ್ಪ ಚೇತರಿಕೆ ಕಂಡು 50 ಸಾವಿರ ತಲುಪಿತ್ತು. ಈಗ ಏಪ್ರಿಲ್ ನಲ್ಲಿ ಗರಿಷ್ಠ 54 ಸಾವಿರ ಗಡಿ ತಲುಪಿತ್ತು. ಮೇ ತಿಂಗಳಲ್ಲಿ ಗರಿಷ್ಠ ಈಗ 55 ಸಾವಿರ ತಲುಪಿದೆ.

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ ವಹಿವಾಟಿನಲ್ಲಿ ಮೇ 17ರಂದು ಪ್ರತಿ ಕ್ವಿಂಟಲ್ ಉತ್ತಮ ರಾಶಿ ಅಡಿಕೆ ಕನಿಷ್ಠ ಬೆಲೆ 49,199 ರೂ., ಗರಿಷ್ಠ ಬೆಲೆ 54,499 ಹಾಗೂ ಸರಾಸರಿ ಬೆಲೆ 53,385 ರೂ.ಗೆ ಮಾರಾಟವಾಗಿದೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top