Connect with us

Dvgsuddi Kannada | online news portal | Kannada news online

ದಾವಣಗೆರೆ: ಅಡಿಕೆ ದರದಲ್ಲಿ ದಿಢೀರ್ ಕುಸಿತ; ಜೂ.26ರ ರಾಶಿ ಅಡಿಕೆ ಧಾರಣೆ ವಿವರ ಇಲ್ಲಿದೆ…

arecanut

ಪ್ರಮುಖ ಸುದ್ದಿ

ದಾವಣಗೆರೆ: ಅಡಿಕೆ ದರದಲ್ಲಿ ದಿಢೀರ್ ಕುಸಿತ; ಜೂ.26ರ ರಾಶಿ ಅಡಿಕೆ ಧಾರಣೆ ವಿವರ ಇಲ್ಲಿದೆ…

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರ (arecanut rate) ಜೂ.26ರಂದು ತೀವ್ರ ಕುಸಿತ ಕಂಡಿದೆ. ಇದರೊಂದಿಗೆ ನಾಲ್ಕೇ ದಿನದಲ್ಲಿ ಬರೋಬ್ಬರಿ 2,500 ರೂ. ಕುಸಿತವಾಗಿದೆ. ಜೂ.26ರ ರಾಶಿ ಅಡಿಕೆ ಧಾರಣೆಯಲ್ಲಿ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 51,600 ರೂ.ಗಳಿದ್ದು, ಕನಿಷ್ಠ ಬೆಲೆ 44,799 ರೂ.ಗಳಾಗಿದೆ. ಜೂನ್ ಮೊದಲ ವಾರ 54 ಸಾವಿರ ಗಡಿ ದಾಟಿತ್ತು. ಜೂ.20ರಿಂದ ಸತತ ಕುಸಿತ ಕಾಣುತ್ತಿದೆ.

ಕಳೆದ ವರ್ಷ (2023) ಜುಲೈ ತಿಂಗಳಲ್ಲಿ ಗರಿಷ್ಠ ಬೆಲೆ 57 ಸಾವಿರ ತಲುಪಿತ್ತು. ಹೀಗಾಗಿ ಇನ್ಮುಂದೆ ಒಳ್ಳೆ ರೇಟ್ ಸಿಗುವ ಸಾಧ್ಯತೆ ಕಡಿಮೆ. ಯಾಕೆಂದರೆ ಮಾರುಕಟ್ಟೆಗೆ ಹೊಸ ಅಡಿಕೆ ಬರುವುದಿ ಶುರುವಾಗುತ್ತದೆ. ಹೀಗಾಗಿ ಇದೇ ಒಳ್ಳೆ ರೇಟ್ ಎಂದುಕೊಂಡು ಮಾರಾಟ ಮಾಡುವುದು ಉತ್ತಮ. ಜಿಲ್ಲೆಯಲ್ಲಿ ಮುಂಗಾರು ಮಳೆ ಉತ್ತಮವಾಗಿದ್ದರೂ ಕಳೆದ 15 ದಿನದಿಂದ ಮಳೆ ಕೊರತೆ ಕಾಡುತ್ತಿದೆ. ಮುಂದಿನ ಮೂರ್ನಾಲ್ಕು ದಿನ ಮಳೆಯಾಗುವ ಮುನ್ಸೂಚನೆ ಇದೆ‌.

ಬಿಸಿ ಗಾಳಿಯ ಅಲೆ ತಗ್ಗಿದೆ. ಕಳೆದ ಬಾರಿಯ ತೀವ್ರ ಬರದಿಂದ ಬೋರ್ ವೆಲ್ ಗಳಲ್ಲಿ ಅಂತರ್ಜಲ ಮಟ್ಟ ತೀವ್ರ ಕುಸಿದಿತ್ತು. ಇದೀಗ ಸ್ವಲ್ಪ ಚೇತರಿಕೆ ಕಾಣುತ್ತಿವೆ. ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ, ಆರಂಭದಲ್ಲಿ ನಿರೀಕ್ಷೆ ಮೂಡಿಸಿ, ಈಗ ಮಳೆ ಕೈಕೊಟ್ಟಿದೆ.

2024 ಜನವರಿ 15ರಂದು ರಾಶಿ ಅಡಿಕೆ ಗರಿಷ್ಠ ದರ 50,500 ರೂಪಾಯಿ ಗಡಿ ತಲುಪಿತ್ತು. ಫೆಬ್ರವರಿ ತಿಂಗಳಲ್ಲಿ‌ ಏಕಾಏಕಿ 48 ಸಾವಿರಕ್ಕೆ ಕುಸಿದಿತ್ತು. ಮಾರ್ಚ್ ತಿಂಗಳಳಲ್ಲಿ ಸ್ವಲ್ಪ ಚೇತರಿಕೆ ಕಂಡು 50 ಸಾವಿರ ತಲುಪಿತ್ತು. ಈಗ ಏಪ್ರಿಲ್ ನಲ್ಲಿ ಗರಿಷ್ಠ 54 ಸಾವಿರ ಗಡಿ ತಲುಪಿತ್ತು. ಮೇ ತಿಂಗಳಲ್ಲಿ ಗರಿಷ್ಠ ಈಗ 55 ಸಾವಿರ ತಲುಪಿ ಕುಸಿತ ಕಂಡಿತ್ತು. ಜೂನ್ ತಿಂಗಳ ಎರಡನೇ ವಾರದಿಂದ ಮತ್ತೆ ಕುಸಿತ ಕಾಣುತ್ತಿದೆ.

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ ವಹಿವಾಟಿನಲ್ಲಿ ಜೂ.26ರಂದು ಪ್ರತಿ ಕ್ವಿಂಟಾಲ್ ಉತ್ತಮ ರಾಶಿ ಅಡಿಕೆ ಕನಿಷ್ಠ ಬೆಲೆ 44,799 ರೂ., ಗರಿಷ್ಠ ಬೆಲೆ 51,600 ಹಾಗೂ ಸರಾಸರಿ ಬೆಲೆ 49,796 ರೂ.ಗೆ ಮಾರಾಟವಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top