Connect with us

Dvgsuddi Kannada | online news portal | Kannada news online

ದಾವಣಗೆರೆ: ಅಡಿಕೆಗೆ ಬಂಪರ್ ಬೆಲೆ; 56 ಸಾವಿರ ಗಡಿ ಸಮೀಪ ಬಂದ ದರ; ರೈತರರಲ್ಲಿ ಸಂತಸ

ಪ್ರಮುಖ ಸುದ್ದಿ

ದಾವಣಗೆರೆ: ಅಡಿಕೆಗೆ ಬಂಪರ್ ಬೆಲೆ; 56 ಸಾವಿರ ಗಡಿ ಸಮೀಪ ಬಂದ ದರ; ರೈತರರಲ್ಲಿ ಸಂತಸ

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಧಾರಣೆಯಲ್ಲಿ (ಜು.03) ಭರ್ಜರಿ ಚೇತರಿಕೆ ಕಂಡಿದೆ. ಏಪ್ರಿಲ್ ನಲ್ಲಿ 48 ಸಾವಿರವಿದ್ದ ಬೆಲೆ, ಮೇ ನಲ್ಲಿ 49 ಸಾವಿರ ಗಡಿ ದಾಟಿತ್ತು. ಜೂನ್ ಲ್ಲಿ 50 ಸಾವಿರ ಗಡಿ ದಾಟಿದ್ದ ಬೆಲೆ, ಇದೀಗ 56 ಸಾವಿರದತ್ತ ಹೆಜ್ಜೆ ಹಾಕುತ್ತಿದೆ. ಇದರಿಂದ ಅಡಿಕೆ ಬೆಳೆದ ರೈತರ ಮೊಗದಲ್ಲಿ ಸಂತಸ ಮೂಡಿದೆ.

ಜು.03ರಂದು ಉತ್ತಮ ರಾಶಿ ಅಡಿಕೆ ಗರಿಷ್ಠ ಬೆಲೆ 55,512 ರೂ.ಗೆ ಮಾರಾಟವಾಗಿದೆ. ಹಿಂದಿನ ದಿನದ ಮಾರುಕಟ್ಟೆಗೆ ಹೋಲಿಸಿದರೆ 1,600ರೂ. ಏರಿಕೆ ಕಂಡಿದೆ. ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ ಅಡಿಕೆ ವಹಿವಾಟಿನಲ್ಲಿ ಜು.03ರಂದು ಪ್ರತಿ ಕ್ವಿಂಟಾಲ್ ಉತ್ತಮ ರಾಶಿ ಅಡಿಕೆ ಕನಿಷ್ಠ ಬೆಲೆ 52,591 ಗರಿಷ್ಠ ಬೆಲೆ 55,512 ಹಾಗೂ ಸರಾಸರಿ ಬೆಲೆ 54,543 ರೂ. ಆಗಿದೆ. ಬೆಟ್ಟೆ ಅಡಿಕೆ ಗರಿಷ್ಠ 40,138ರೂ.ಗೆ ಮಾರಾಟವಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top