ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರವು (arecanut rate) ಇಂದು (ಮಾ.05) ಗರಿಷ್ಠ ಬೆಲೆ 52,099 ರೂ. ತಲುಪಿದೆ. ದಿಢೀರ್ ಏರಿಕೆಯಿಂದ ಖುಷಿಯಲ್ಲಿದ್ದ ರೈತರರಿಗೆ ದರ ಕುಸಿತ ಆತಂಕ ತಂದಿದೆ.
ದಾವಣಗೆರೆ: ಕೋಳಿ ಶೀತ ಜ್ವರಕ್ಕೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ; ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಸ್ಪಷ್ಟನೆ
- ಮಾ.05ರ ಚನ್ನಗಿರಿ ರಾಶಿ ಅಡಿಕೆ ಧಾರಣೆ (ಪ್ರತಿ ಕ್ವಿಂಟಲ್ ದರ)
- ಗರಿಷ್ಠ ಬೆಲೆ 52,099
- ಕನಿಷ್ಠ ಬೆಲೆ 40,299
- ಸರಾಸರಿ ಬೆಲೆ 49,421
- ಬೆಟ್ಟೆ ಅಡಿಕೆ ದರ
- ಗರಿಷ್ಠ ಬೆಲೆ 25,187
- ಕನಿಷ್ಠ ಬೆಲೆ 24,187
- ಸರಾಸರಿ ಬೆಲೆ 24,687
ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ (Channagiri) ವಹಿವಾಟಿನಲ್ಲಿ ಮಾ.05ರಂದು ರಾಶಿ ಅಡಿಕೆ ಗರಿಷ್ಠ ಬೆಲೆ ಕ್ವಿಂಟಲ್ ಗೆ 52,099ರೂ. ಇದ್ದು, ಕನಿಷ್ಠ ಬೆಲೆ 40,299 ರೂ., ಸರಾಸರಿ ಬೆಲೆ 49,421 ರೂ.ಇದೆ.
ಮಹಿಳಾ ಸ್ವಸಹಾಯ ಗುಂಪುಗಳಿಗೆ ಅರ್ಥಿಕ ಬಲ ನೀಡಲು ಮುಂದಾದ ಸರ್ಕಾರ; ಚಿಟ್ ಫಂಡ್ ವ್ಯವಸ್ಥೆ ಜಾರಿಗೆ ಸಿದ್ಧತೆ
ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕಿನಲ್ಲಿ ಅಡಿಕೆ ಮುಖ್ಯ ಬೆಳೆಯಾಗಿದೆ. ದಿನದಿಂದ ದಿನಕ್ಕೆ ಬಿಸಿಲು ಏರಿಕೆಯಾಗುತ್ತಿದೆ. ಬೇಸಿಗೆ ಬಿಸಿಲಿನಿಂದ ಅಡಿಕೆ ತೋಟ ರಕ್ಷಣೆಗೆ ರೈತರು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ.
ರಾಜ್ಯದ ವಿವಿಧ ಇಲಾಖೆಯಲ್ಲಿ 2.76 ಲಕ್ಷ ಹುದ್ದೆಗಳು ಖಾಲಿ; ವಿಧಾನಸಭೆಗೆ ಸಿಎಂ ಮಾಹಿತಿ
ಜನವರಿ ಕೊನೆಯಲ್ಲಿ 52 ಸಾವಿರ ಒಳಗೆ ಇದ್ದ ದರ, ಫೆಬ್ರವರಿಯಲ್ಲಿ ಮತ್ತೆ 53 ಸಾವಿರ ಗಡಿ ದಾಟಿತ್ತು. ಮಾರ್ಚ್ ಮೊದಲ ವಾರದಲ್ಲಿ ಸ್ವಲ್ಪ ಇಳಿಕೆಯಾಗಿದ್ದು, 52 ಸಮೀಪಇದೆ. 2023 ಜುಲೈ ತಿಂಗಳಲ್ಲಿ ಗರಿಷ್ಠ ಬೆಲೆ 57 ಸಾವಿರ ತಲುಪಿತ್ತು. ಕಳೆದ ವರ್ಷ 2024ರ ಮೇ ತಿಂಗಳಲ್ಲಿ ಗರಿಷ್ಠ 55 ಸಾವಿರ ತಲುಪಿತ್ತು.